Friday, 22nd November 2024

ಜೂನ್ 22ರಿಂದ ಮೋದಿ ಅಮೆರಿಕ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 22ರಿಂದ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ವೇಳೆ ಅಮೆರಿಕದ ಸಂಸತ್ತಿನ ಎರಡೂ ಮನೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಮೆರಿಕದ ನಾಯಕರು ಹೇಳಿದ್ದಾರೆ. ಅಮೆರಿಕ ಸಂಸತ್ ಉದ್ದೇಶಿಸಿ ಮಾತನಾಡಲು ಅವಕಾಶ ಕಲ್ಪಿಸುವುದು ಯಾವುದೇ ವಿದೇಶಿ ನಾಯಕನಿಗೆ ನೀಡುವ ಅತ್ಯುನ್ನತ ಗೌರವವಾಗಿದೆ ಎಂದು ಹೇಳಲಾಗುತ್ತಿದೆ.

ಅಮೆರಿಕದ ಸ್ಟೇಟ್ಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮತ್ತು ಸೆನೆಟ್‌ನ ಉಭಯಪಕ್ಷೀಯ ನಾಯಕತ್ವದ ಪರವಾಗಿ ಜೂನ್ 22 ದಂದು ಕಾಂಗ್ರೆಸ್‌ನ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ಮೋದಿಯನ್ನು ಆಹ್ವಾನಿಸುವುದು ನಮ್ಮ ಗೌರವವಾಗಿದೆ ಎಂದು ಹೌಸ್ ಸ್ಪೀಕರ್ ಕೆವಿನ್ ಮೆಕಾರ್ಥಿ, ಸೆನೆಟ್ ನಾಯಕ ಚಕ್ ಶುಮರ್, ಸೆನೆಟ್ ರಿಪಬ್ಲಿಕನ್ ನಾಯಕ ಮಿಚ್ ಮೆಕ್‌ಕಾನ್ನೆಲ್ ಮತ್ತು ಹೌಸ್ ಡೆಮಾಕ್ರಟಿಕ್ ನಾಯಕ ಹಕೀಮ್ ಜೆಫ್ರೀಸ್ ಅವರು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧ್ಯಕ್ಷ ಜೋ ಬೈಡೆನ್ ಅವರು ಆತಿಥ್ಯ ನೀಡಲಿದ್ದಾರೆ. ಇದರಲ್ಲಿ ಔತಣಕೂಟ ಕೂಡ ಇರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಅಮೆರಿಕದ ಸಂಸತ್ತು ಉದ್ದೇಶಿಸಿ ಮಾತನಾಡಲಿದ್ದಾರೆ. 2009ರಲ್ಲಿ ಆಗಿನ ಅಧ್ಯಕ್ಷ ಬರಾಕ್ ಒಬಾಮಾ ಅವರು ಆತಿಥ್ಯ ವಹಿಸಿದ್ದ ಮನಮೋಹನ್ ಸಿಂಗ್ ಅವರು ಅಮೆರಿಕ ಪ್ರವಾಸ ಕೈಗೊಂಡಕೊನೆಯ ಭಾರತೀಯ ಪ್ರಧಾನಿಯಾಗಿದ್ದರು.