Friday, 22nd November 2024

35,700 ಕೋಟಿ ರೂ. ವೆಚ್ಚದ ಹಲವು ಅಭಿವೃದ್ಧಿ ಯೋಜನೆಗೆ ಚಾಲನೆ

ನವದೆಹಲಿ: ಪ್ರಧಾನಿ ಮೋದಿಯವರ ಜಾರ್ಖಂಡ್ ಭೇಟಿ ವೇಳೆ, ಧನ್‌ಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 35,700 ಕೋಟಿ ರೂ. ವೆಚ್ಚದ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಸಿಂದ್ರಿ ರಸಗೊಬ್ಬರ ಕಾರ್ಖಾನೆಯನ್ನ ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ.

ಜಾರ್ಖಂಡ್‌ನಲ್ಲಿ ರಸಗೊಬ್ಬರ, ರೈಲು, ವಿದ್ಯುತ್ ಮತ್ತು ಕಲ್ಲಿದ್ದಲು ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುವ 35,700 ಕೋಟಿ ರೂ. ಅಭಿವೃದ್ಧಿ ಯೋಜನೆ ಗಳನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅನಾವರಣಗೊಳಿಸಿದರು.

ಹಿಂದೂಸ್ತಾನ್ ಉರ್ವರಕ್ ಮತ್ತು ರಸಾಯನ ಲಿಮಿಟೆಡ್ ಸಿಂದ್ರಿ ರಸಗೊಬ್ಬರ ಘಟಕವನ್ನ ಪ್ರಧಾನ ಮಂತ್ರಿಗಳ ರಾಷ್ಟ್ರಕ್ಕೆ ಸಮರ್ಪಿಸಿದರು. 8,900 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ರಸಗೊಬ್ಬರ ಘಟಕವು ಯೂರಿಯಾ ವಲಯದಲ್ಲಿ ಸ್ವಾವಲಂಬನೆಯತ್ತ ಹೆಜ್ಜೆ ಹಾಕುತ್ತಿದೆ. ಇದು ದೇಶದ ದೇಶೀಯ ಯೂರಿಯಾ ಉತ್ಪಾದನೆಗೆ ವಾರ್ಷಿಕ 12.7 LMT ಅನ್ನು ಸೇರಿಸುತ್ತದೆ. ಇದು ದೇಶದ ರೈತರಿಗೆ ಪ್ರಯೋಜನವನ್ನ ನೀಡುತ್ತದೆ.