Thursday, 12th December 2024

ಹ್ಯಾಟ್ರಿಕ್‌ ಗೆಲುವು ಸಾಧಿಸಿರುವ ಪ್ರಧಾನಿ ಮೋದಿ: ವಿಶ್ವದ ನಾಯಕರಿಂದ ಅಭಿನಂದನೆ

ವದೆಹಲಿ: 290 ಸ್ಥಾನಗಳ ಮೂಲಕ ಬಿಜೆಪಿ ನೇತೃತ್ವ ಎನ್‌ಡಿಎ ಸರ್ಕಾರ ಮೂರನೇ ಬಾರಿ ಗದ್ದುಗೆ ಏರಲು ಸಜ್ಜಾಗಿದೆ. ಹ್ಯಾಟ್ರಿಕ್‌ ಗೆಲುವು ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶ್ವದ ಹಲವು ನಾಯಕರಿಂದ ಅಭಿನಂದನೆ ಮಹಾಪೂರಗಳು ಹರಿದುಬಂದಿವೆ.

ಮಾಲ್ಡೀವಿಯನ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಇಟಾಲಿಯನ್ ಅಧ್ಯಕ್ಷೆ ಜಾರ್ಜಿಯಾ ಮೆಲೋನಿ ಸೇರಿದಂತೆ ನೆರೆಯ ರಾಷ್ಟ್ರಗಳಾದ ಭೂತಾನ್‌, ನೇಪಾಳಗಳಿಂದ ನಾಯಕರು ಟ್ವೀಟ್‌ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

‘2024 ರ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಯಶಸ್ವಿಯಾಗಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು ಎನ್‌ಡಿಎ ಒಕ್ಕೂಟಕ್ಕೆ ಅಭಿನಂದನೆಗಳು. ಎರಡೂ ದೇಶಗಳ ಸಾಮಾನ್ಯ ಏಳಿಗೆಗಾಗಿ ಒಟ್ಟಾಗಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ’ ಎಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಹೇಳಿದ್ದಾರೆ.