Monday, 25th November 2024

ನಾಳೆ ಪ್ರಧಾನಿ ಜಮ್ಮು ಭೇಟಿ: ವಿವಿಧ ಯೋಜನೆಗಳ ಉದ್ಘಾಟನೆ

ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜಮ್ಮುವಿಗೆ ಭೇಟಿ ನೀಡಲಿದ್ದಾರೆ.

ಅಲ್ಲಿ ಚೆನಾಬ್ ಮೇಲಿನ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಮತ್ತು ಉತ್ತರ ಭಾರತದ ಮೊದಲ ನದಿ ಪುನರುಜ್ಜೀವನ ಯೋಜನೆ – ದೇವಿಕಾ ಸೇರಿದಂತೆ ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಜಮ್ಮುವಿನಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಭೇಟಿಗೂ ಮುನ್ನ ಜಮ್ಮು ಮತ್ತು ಕಾಶ್ಮೀರದಾದ್ಯಂತ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿದ್ದು, ಅಧಿಕಾರಿಗಳು ಜಮ್ಮುವಿ ನಲ್ಲಿ ಹಾರುವ ಡ್ರೋನ್‌ಗಳು, ಪ್ಯಾರಾಗ್ಲೈಡರ್‌ಗಳು ಮತ್ತು ರಿಮೋಟ್ ಕಂಟ್ರೋಲ್ ಮೈಕ್ರೋ-ಲೈಟ್ ಏರ್‌ಕ್ರಾಫ್ಟ್‌ಗಳನ್ನು ತಾತ್ಕಾಲಿಕವಾಗಿ ನಿಷೇಧಿಸಿ ದ್ದಾರೆ.

ಜಮ್ಮುವಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಚಿನ್ ಕುಮಾರ್ ವೈಶ್ಯ ಅವರು ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144 ರ ಅಡಿಯಲ್ಲಿ ಆದೇಶವನ್ನು ಹೊರಡಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಪ್ರಧಾನಿ ಮೋದಿ ಅವರು ಸಾರ್ವಜನಿಕವಾಗಿ 30,500 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ದೇಶಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.

ಕಾರ್ಯಕ್ರಮದ ಸಂದರ್ಭದಲ್ಲಿ, ಜಮ್ಮು ಮತ್ತು ಕಾಶ್ಮೀರದ ಸುಮಾರು 1500 ಹೊಸ ಸರ್ಕಾರಿ ನೇಮಕಾತಿಗಳಿಗೆ ಪ್ರಧಾನಿ ನೇಮಕಾತಿ ಆದೇಶಗಳನ್ನು ವಿತರಿಸಲಿದ್ದಾರೆ. ‘ವಿಕ್ಷಿತ್ ಭಾರತ್ ವಿಕ್ಷಿತ್ ಜಮ್ಮು’ ಕಾರ್ಯಕ್ರಮದ ಭಾಗವಾಗಿ ಅವರು ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪಿಎಂಒ ತಿಳಿಸಿದೆ.