ಜಾಲೋರ್: ನೇರವಾಗಿ ಚುನಾವಣೆ ಗೆಲ್ಲಲಾಗದವರು ರಾಜಸ್ಥಾನಕ್ಕೆ ಬಂದು ರಾಜ್ಯಸಭೆ ಮೂಲಕ ಸಂಸತ್ತು ಪ್ರವೇಶಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ.
ರಾಜಸ್ಥಾನದ ಜಾಲೋರ್ನಲ್ಲಿ ಚುನಾವಣಾ ಪ್ರಚಾರ ಮಾಡುವ ವೇಳೆ ಮಾತನಾಡಿದ ಮೋದಿ, ರಾಜಸ್ಥಾನದಿಂದ ರಾಜ್ಯಸಭೆ ಮೂಲಕ ಸಂಸತ್ ಪ್ರವೇಶಿಸಿ ವೇಣುಗೋಪಾಲ್, ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿ ಅವರನ್ನು ಟೀಕಿಸಿದ್ದಾರೆ.
ಮಾಜಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ 2004ರಿಂದ 2024ರವರೆಗೂ ರಾಯ್ಬರೇಲಿ ಕ್ಷೇತ್ರದಿಂದ ಗೆದ್ದು ಸಂಸತ್ತಿಗೆ ಹೋಗಿದ್ದರು. ಈ ಬಾರಿ ಅವರು ರಾಯ್ಬರೇಲಿಯಲ್ಲಿ ಸ್ಪರ್ಧಿಸುತ್ತಿಲ್ಲ. ರಾಜ್ಯಸಭೆ ಮೂಲಕ ಸಂಸತ್ ಪ್ರವೇಶಿಸಿದ್ದಾರೆ.
ಮಾಜಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಳೆದ 20 ವರ್ಷದಿಂದ ರಾಯ್ಬರೇಲಿ ಕ್ಷೇತ್ರದಲ್ಲಿ ಗೆಲ್ಲುತ್ತಾ ಬಂದಿದ್ದವರು ಈ ಬಾರಿ ರಾಜಸ್ಥಾನದಿಂದ ರಾಜ್ಯಸಭೆಗೆ ಪ್ರವೇಶ ಮಾಡಿದ್ದಾರೆ. ಈ ರಾಜ್ಯದಿಂದ ರಾಜ್ಯಸಭೆಗೆ ಹೋದವರು ರಾಜ್ಯದ ಜನರಿಗಾಗಿ ಏನೂ ಕೆಲಸ ಮಾಡಲಿಲ್ಲ ಎಂದೂ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ರಾಜಸ್ಥಾನದಲ್ಲಿ 25 ಲೋಕಸಭಾ ಕ್ಷೇತ್ರಗಳಲ್ಲಿದ್ದು 12 ಸ್ಥಾನಗಳಿಗೆ ಏ.19ರಂದು ಮತದಾನವಾಗಿತ್ತು. ಏ.26ರಂದು ನಡೆಯುವ ಎರಡನೇ ಹಂತದ ಚುನಾವಣೆಯಲ್ಲಿ ಉಳಿದ 13 ಸ್ಥಾನಗಳಿಗೆ ಮತದಾನವಾಗಲಿದೆ.