Thursday, 12th December 2024

ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ರ್ಯಾಲಿ ರದ್ದು

ಸಂಕ್ವೆಲಿಮ್: ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ನಡೆಯ ಬೇಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವರ್ಚುವಲ್ ರ್ಯಾಲಿಯನ್ನು ರದ್ದುಗೊಳಿಸಲಾಗಿದೆ.

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದು, ಲತಾ ಮಂಗೇಶ್ಕರ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಗೋವಾದಲ್ಲಿ ನಡೆಯಬೇಕಿದ ಪ್ರಧಾನಮಂತ್ರಿಗಳ ರ್ಯಾಲಿ ಹಾಗೂ ಇತರೆ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ. 2 ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಆಚರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಗೆ ಗೋವಾ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಬೇಕಿತ್ತು. ಜೊತೆಗೆ ನಿತಿನ್ ಗಡ್ಕರಿ ಅವರ ಸಭೆ ಯನ್ನೂ ರದ್ದುಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗೋವಾದಲ್ಲಿ ಫೆ.14 ರಂದು ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಗೋವಾದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಭಾಷಣ ಮಾಡಬೇಕಿತ್ತು.