Monday, 9th December 2024

ಗುರುಪ್ರಸಾದ್ ಮೊಹಪಾತ್ರ ಕರೋನಾ ಸೋಂಕಿಗೆ ಬಲಿ

ನವದೆಹಲಿ: ಕೇಂದ್ರ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್ ಮೊಹಪಾತ್ರ ಕರೋನಾ ಸೋಂಕಿನಿಂದ ವಿಧಿವಶರಾಗಿ ದ್ದಾರೆ.

ಕಳೆದ ಏಪ್ರಿಲ್ ನಲ್ಲಿ ಮೊಹಪಾತ್ರ ಅವರಿಗೆ ಸೋಂಕು ದೃಢಪಟ್ಟಿತ್ತು. ಹಲವು ದಿನಗಳಿಂದ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಕೊನೆಯುಸಿರೆಳೆದಿದ್ದಾರೆ.

1986ರ ಬ್ಯಾಚ್ ನ ಗುಜರಾತ್ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದರು. ಗುಜರಾತ್ ನಲ್ಲಿ ನರೇಂದ್ರ ಮೋದಿ ಜೊತೆ ಯಲ್ಲಿಯೂ ಕಾರ್ಯನಿರ್ವಹಿಸಿದ್ದರು.

ಮೊಹಪಾತ್ರ ನಿಧನಕ್ಕೆ ಪ್ರಧಾನಿ ಮೋದಿ, ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿ ದ್ದಾರೆ.