Sunday, 15th December 2024

ತೆಲಂಗಾಣದ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್ ಪತ್ತೆ

ಹೈದರಾಬಾದ್: ವಿದೇಶದಿಂದ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಗೆ ಮರಳಿದ 40 ವರ್ಷದ ವ್ಯಕ್ತಿಯೊಬ್ಬರು ಮಂಕಿ ಪಾಕ್ಸ್ ಕಾಯಿಲೆಯ ಲಕ್ಷಣಗಳನ್ನು ತೋರಿಸಿದ್ದಾರೆ. ರೋಗಿಯನ್ನು ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಮಂಗನ ಕಾಯಿಲೆಯ ಲಕ್ಷಣ ತೋರಿಸಿದ ವ್ಯಕ್ತಿ ಜು.6 ರಂದು ಕುವೈತ್‌ ನಿಂದ ಬಂದಿದ್ದು, ಜು.20 ರಂದು ಜ್ವರ ಕಾಣಿಸಿಕೊಂಡಿದೆ. ಜು.23 ರಂದು ದದ್ದು ಕಾಣಿಸಿಕೊಂಡ ನಂತರ ವ್ಯಕ್ತಿಯನ್ನು ಕಾಮರೆಡ್ಡಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಖಾಸಗಿ ಆಸ್ಪತ್ರೆಯ ವೈದ್ಯರು ಮಂಕಿ ಪಾಕ್ಸ್ ಲಕ್ಷಣಗಳನ್ನು ಗಮನಿಸಿದ ನಂತರ ವ್ಯಕ್ತಿಯನ್ನು ಕಾಮರೆಡ್ಡಿ ಜಿಲ್ಲೆಯ ಸರಕಾರಿ ಆಸ್ಪತ್ರೆಗೆ ಕಳುಹಿಸಿ ದ್ದಾರೆ ಎಂದು ರಾವ್ ಹೇಳಿದರು.

“ನಾವು ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ಆರು ಜನರನ್ನು ಗುರುತಿಸಿದ್ದೇವೆ. ಅವರಿಗೆ ಯಾವುದೇ ರೋಗಲಕ್ಷಣಗಳಿಲ್ಲದಿದ್ದರೂ, ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ” ಎಂದು ಹಿರಿಯ ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ.

ಈಗಾಗಲೇ ಕೇರಳದಲ್ಲಿ ಮೂರು ಮತ್ತು ದೆಹಲಿಯಲ್ಲಿ ಒಂದು ಪ್ರಕರಣ ದೃಢ ಪಟ್ಟಿದೆ.