Thursday, 12th December 2024

ಮಂಕಿಪಾಕ್ಸ್ ಕಾಯಿಲೆಪೀಡಿತ ಮೊದಲ ವ್ಯಕ್ತಿ ಗುಣಮುಖ

ತಿರುವನಂತಪುರಂ: ದೇಶದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ ಕಾಯಿಲೆ ಕಾಣಿಸಿಕೊಂಡು, ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳದ ವ್ಯಕ್ತಿಯೋರ್ವರು ಕಾಯಿಲೆಯಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿದ್ದರಿಂದ ರಾಷ್ಟ್ರೀಯ ವೈರಾಣು ಸಂಸ್ಥೆ ಸೂಚನೆಯಂತೆ 72 ಗಂಟೆಯಲ್ಲಿ ಎರಡು ಬಾರಿ ಪರೀಕ್ಷೆ ನಡೆಸಲಾಗಿದೆ. ಎರಡು ಬಾರಿಯೂ ಎಲ್ಲಾ ಸ್ಯಾಂಪಲ್ ಗಳಲ್ಲಿ ನೆಗೆಟಿವ್ ವರದಿಯಾಗಿದೆ. ರೋಗಿ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿದ್ದಾರೆ. ಚರ್ಮದ ಮೇಲಿನ ದುದ್ದುಗಳು ಸಂಪೂರ್ಣವಾಗಿ ಗುಣಮುಖವಾಗಿದ್ದು, ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗು ವುದು ಎಂದು ತಿಳಿಸಿದ್ದಾರೆ.

ಪ್ರಸ್ತುತ ಪಾಸಿಟಿವ್ ಕಾಣಿಸಿಕೊಂಡಿದ್ದ ಇತರ ಇಬ್ಬರ ಆರೋಗ್ಯವೂ ಸುಧಾರಿಸಿದೆ. ಇದೇ ರೀತಿಯಲ್ಲಿ ರೋಗ ತಡೆ ಕ್ರಮಗಳು ಮುಂದುವರೆಯಲಿವೆ ಎಂದು ಸಚಿವರು ಹೇಳಿದ್ದಾರೆ. ವಿದೇಶದಿಂದ ಕೇರಳಕ್ಕೆ ಮರಳಿದ್ದ ಕೊಲ್ಲಂ ನಿವಾಸಿಗೆ ಜು.14 ರಂದು ಮಂಕಿಪಾಕ್ಸ್ ಲಕ್ಷಣಗಳು ಹಾಗೂ ಪಾಸಿಟಿವ್ ಕಂಡುಬಂದ ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.