Friday, 13th December 2024

20 ಸಾವಿರ ಗಡಿ ದಾಟಿದ ಕರೋನಾ ಪ್ರಕರಣ

#corona

ನವದೆಹಲಿ: ಭಾರತದಲ್ಲಿ ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಮೂರು ತಿಂಗಳ ನಂತರ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಸಾವಿರ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ 20139 ಜನರಿಗೆ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆ ಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 38 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 16,482 ಸೋಂಕಿತರು ಗುಣಮುಖರಾಗಿದ್ದಾರೆ.

ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,689,989ಕ್ಕೆ ಏರಿಕೆ ಯಾಗಿದೆ. ಇದುವರೆಗೂ 43,028,356 ಸೋಂಕಿತರು ಗುಣಮುಖರಾಗಿದ್ದು, 525,557 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 136,076ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.