ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ವೇಳೆ ಮೃತಪಟ್ಟ ರೈತರ ಗೌರವಾರ್ಥ ಇಂದು ಶೋಕದಿನ ಆಚರಣೆ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ಕೊಟ್ಟಿದೆ.
ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನ.26 ರಿಂದ ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಂಘ ಗಡಿಯಲ್ಲಿ 32 ಕ್ಕೂ ಹೆಚ್ಚು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ವೇಳೆ ಮೃತಪಟ್ಟ ರೈತರ ಗೌರವಾರ್ಥ ಶೋಕ ದಿನ ಆಚರಣೆ ನಡೆಸಲು ಕರೆ ಕೊಟ್ಟಿದೆ.
ಶೋಕ ದಿನ ಆಚರಣೆ ಅಂಗವಾಗಿ ಪ್ರತಿಭಟನೆ ವೇಳೆ ಮೃತಪಟ್ಟ ರೈತರ ಹಳ್ಳಿಗಳಲ್ಲಿ ಗೌರವ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.