Saturday, 14th December 2024

ಮಮತಾ ಟೀಂ ಸೇರಿದ ಸಂಸದ ಬಾಬುಲ್ ಸುಪ್ರಿಯೋ

ಕೋಲ್ಕತ್ತಾ: ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ, ಸಂಸದ ಬಾಬುಲ್ ಸುಪ್ರಿಯೋ ಈಗ ತೃಣಮೂಲ ಕಾಂಗ್ರೆಸ್‌ ಅನ್ನು ಸೇರ್ಪಡೆಯಾಗಿದ್ದಾರೆ ಎಂದು ವರದಿಯಾಗಿದೆ.

ರಾಜಕೀಯ ತ್ಯಜಿಸುವ ನಿರ್ಧಾರ ಕೈಗೊಂಡಿದ್ದ ಮಾಜಿ ಕೇಂದ್ರ ಸಚಿವ, ಬಾಬುಲ್ ಸುಪ್ರಿಯೋ ಕಳೆದ ತಿಂಗಳು ಆಗಸ್ಟ್‌ 1 ರಂದು ರಾಜಕೀಯ ನಿರ್ಗಮನ ಘೋಷಣೆ ಮಾಡಿದ್ದರು. ಹಾಗೆಯೇ ತನ್ನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಈ ಸಂದರ್ಭದಲ್ಲೇ ಬಾಬುಲ್ ಸುಪ್ರಿಯೋ ಟಿಎಂಸಿ ಸೇರ ಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಆದರೆ ಬಾಬುಲ್ ಸುಪ್ರಿಯೋ ಮಾತ್ರ ರಾಜಕೀಯ ಪ್ರವೇಶವನ್ನು ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು.

ಇನ್ನುನಾಲ್ವರು ಬಿಜೆಪಿ ಶಾಸಕರುಗಳು ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಈಗ ಬಿಜೆಪಿಯ ಮಾಜಿ ಕೇಂದ್ರ ಸಚಿವ ಬಾಬುಲ್‌ ಸುಪ್ರೀಯೋ ಕೂಡ ಟಿಎಂಸಿಗೆ ಸೇರ್ಪಡೆಯಾಗಿರುವುದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭಾರೀ ಮುಖಭಂಗ ಉಂಟು ಮಾಡಿದೆ. ಟಿಎಂಸಿ, ಕಾಂಗ್ರೆಸ್, ಸಿಪಿಐಎಂ ಯಾವ ಪಕ್ಷಕ್ಕೂ ಸೇರ್ಪಡೆ ಮಾಡುತ್ತಿಲ್ಲ. ಯಾರೂ ನನ್ನನ್ನು ಕರೆದಿಲ್ಲ ಎಂದು ಈ ಮೂಲಕ ನಾನು ದೃಢಪಡಿಸುತ್ತೇನೆ,” ಎಂದು ತಿಳಿಸಿದ್ದರು.

2014 ರಿಂದ ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾಗಿ ಹಲವಾರು ಖಾತೆಗಳನ್ನು ನಿರ್ವಹಿಸಿದ್ದ ಸುಪ್ರಿಯೋರನ್ನು ಕಳೆದ ತಿಂಗಳ ಆರಂಭದಲ್ಲಿ ಪ್ರಮುಖ ಸಂಪುಟ ಪುನರ್‌ ರಚನೆಯ ಸಂದರ್ಭದಲ್ಲಿ ಹೊರ ಹಾಕಲಾಗಿದೆ.