Thursday, 12th December 2024

ಮಧ್ಯಪ್ರದೇಶ ಫಲಿತಾಂಶ: 18 ಕ್ಷೇತ್ರದಲ್ಲಿ ಬಿಜೆಪಿ, 8 ರಲ್ಲಿ ಕಾಂಗ್ರೆಸ್ ಮುನ್ನಡೆ

ಮಧ್ಯಪ್ರದೇಶ: ಮಧ್ಯಪ್ರದೇಶದ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, 28 ಕ್ಷೇತ್ರಗಳಲ್ಲಿ 18 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ, 8 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಮಧ್ಯಪ್ರದೇಶದಲ್ಲಿ ಒಟ್ಟು 28 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಫಲಿತಾಂಶ ಕೆಲ ಗಂಟಗಳಲ್ಲೇ ಹೊರಬೀಳಲಿದೆ. 230 ಸದಸ್ಯ ಬಲದ ವಿಧಾನಸಭೆಯಲ್ಲಿ 133 ಮ್ಯಾಜಿಕ್​ ನಂಬರ್​ ಪಡೆದು ಬಹುಮತ ಗಳಿಸಿದರೆ ಸರ್ಕಾರ ಸುಭದ್ರವಾಗಿರಲಿದೆ.

ಬಿಜೆಪಿ ಸರ್ಕಾರ ರಚಿಸಲು 8 ಸ್ಥಾನಗಳಲ್ಲಿ ಬಿಜೆಪಿ ಗೆಲುವು ದಾಖಲಿಸಿದರೆ ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ.