ನವದೆಹಲಿ : ಕರೋನಾ ಸೋಂಕಿಗೆ ತುತ್ತಾಗಿದ್ದ ಖಾಂಡ್ವಾ ಕ್ಷೇತ್ರದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನ ರಾದರು.
ನಂದ್ ಕುಮಾರ್ ಅವರು ದೆಹಲಿ ಎನ್ ಸಿಆರ್ ನ ಮೇದಂಟಾ ಆಸ್ಪತ್ರೆಯಲ್ಲಿ ಕರೋನಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಸೋಮವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರಿಗೆ ಜನವರಿ 11ರಂದು ಕೊರೋನಾ ವೈರಸ್ ಸೋಂಕು ದೃಢಪಟ್ಟಿದ್ದು, ಬಳಿಕ ಅವರನ್ನು ಭೋಪಾಲ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಹದಗೆಟ್ಟ ನಂತರ ಅವರನ್ನು ದೆಹಲಿಯ ಮೇದಂಟಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.