Thursday, 12th December 2024

ಲೋಕಸಭೆಯಿಂದ 14 ಸಂಸದರ ಅಮಾನತು

ನವದೆಹಲಿ: ಭದ್ರತಾ ಲೋಪ ಪ್ರಕರಣ ಸಂಬಂಧ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಲೋಕಸಭೆಯಿಂದ ಐವರು ಕಾಂಗ್ರೆಸ್ ಸಂಸದರನ್ನು ಗುರುವಾರ ಅಮಾನತುಗೊಳಿಸಲಾಗಿದೆ.

ಪ್ರಕರಣ ಸಂಬಂಧ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಲೋಕಸಭೆಯಿಂದ ಕಾಂಗ್ರೆಸ್ ಐವರು ಸೇರಿ 14 ಸಂಸದರನ್ನು ಗುರುವಾರ ಅಮಾನತು ಗೊಳಿಸಲಾಗಿದೆ. ಸಂಸದರ ಬಗ್ಗೆ ಸ್ಪೀಕರ್​ ಹೆಸರಿಸಿದ ನಂತರ ಈ ನಿರ್ಣಯವನ್ನು ಸದನದಲ್ಲಿ ಅಂಗೀಕರಿಸಲಾಯಿತು.

ಸಂಸದರಾದ ಟಿ.ಎನ್.ಪ್ರತಾಪನ್, ಹಿಬಿ ಈಡನ್, ಜ್ಯೋತಿಮಣಿ, ರಮ್ಯಾ ಹರಿದಾಸ್ ಮತ್ತು ಡೀನ್ ಕುರಿಯಾಕೋಸ್ ಕುರ್ಯಕಸ್ ಅವರನ್ನು ಅಧಿವೇಶನದ ಉಳಿದ ಅವಧಿಯವರೆಗೆ ಅಮಾನತು ಮಾಡಲಾಗಿದೆ. ಗದ್ದಲದ ನಡುವೆಯೇ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಐವರನ್ನು ಅಮಾನತುಗೊಳಿಸುವ ನಿರ್ಣಯ ಮಂಡಿಸಿದರು.

ಲೋಕಸಭೆ ಕಲಾಪಕ್ಕೆ ಇಬ್ಬರು ದುಷ್ಕರ್ಮಿಗಳು ನುಗ್ಗಿದ್ದ ಕುರಿತಾದ ಭದ್ರತಾ ಲೋಪ ಬಗ್ಗೆ ಪ್ರತಿಪಕ್ಷಗಳ ಸದಸ್ಯರು ಘೋಷಣೆಗಳು ಕೂಗಿದರು.

ಮತ್ತೊಂದೆಡೆ, ರಾಜ್ಯಸಭೆಯಲ್ಲಿಅಶಿಸ್ತಿನ ವರ್ತನೆ ಮತ್ತು ಸಭಾಪತಿಯ ನಿರ್ದೇಶನಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಟಿಎಂಸಿ ಸದಸ್ಯ ಡೆರೆಕ್ ಒಬ್ರಿಯಾನ್ ಅವರನ್ನು ಸದನದಿಂದ ಅಮಾನತುಗೊಳಿಸಲಾಗಿದೆ.