Sunday, 15th December 2024

ಮುಖೇಶ್ ಅಂಬಾನಿಗೆ ಜೀವ ಬೆದರಿಕೆ ಮೇಲ್

ವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಗೆ ಜೀವ ಬೆದರಿಕೆ ಮೇಲ್ ಬಂದಿರುವುದಾಗಿ ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿಗೆ ಅಕ್ಟೋಬರ್ 27 ರಂದು ಇಮೇಲ್ ಮೂಲಕ ಕೊಲೆ ಬೆದರಿಕೆ ಬಂದಿದ್ದು, 20 ಕೋಟಿ ರೂ.ಗಳನ್ನು ಪಾವತಿಸಲು ವಿಫಲವಾದರೆ ಗುಂಡಿಕ್ಕಿ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ.

ಮುಂಬೈನ ಗಾಮ್ದೇವಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.