Friday, 13th December 2024

ಗೌತಮ್ ಅದಾನಿಯನ್ನು ಹಿಂದಿಕ್ಕಿದ ಮುಖೇಶ್ ಅಂಬಾನಿ

ವದೆಹಲಿ: ಫೋರ್ಬ್ಸ್ ರಿಯಲ್-ಟೈಮ್ ಬಿಲಿಯನೇರ್‌ಗಳ ಪಟ್ಟಿಯ ಪ್ರಕಾರ, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಚೇರ್ಮನ್ ಮುಖೇಶ್ ಅಂಬಾನಿ ಗೌತಮ್ ಅದಾನಿಯನ್ನು ಹಿಂದಿಕ್ಕಿ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಅದಾನಿ ಸಮೂಹದ ಷೇರುಗಳಲ್ಲಿ ಭಾರೀ ಪ್ರಮಾಣದ ಕುಸಿತವಾಗಿದೆ. ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಅವರ ನಿವ್ವಳ ಮೌಲ್ಯವು 74 ಬಿಲಿಯನ್ ಡಾಲರ್‌ಗೆ ಕುಸಿದಿದೆ.

$84.3 ಬಿಲಿಯನ್ ನಿವ್ವಳ ಮೌಲ್ಯದೊಂದಿಗೆ, ಮುಖೇಶ್ ಅಂಬಾನಿ ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 9 ನೇ ಸ್ಥಾನದಲ್ಲಿ ದ್ದಾರೆ. 84.1 ಬಿಲಿಯನ್ ಡಾಲರ್ ನಿವ್ವಳ ಮೌಲ್ಯ ದೊಂದಿಗೆ ಗೌತಮ್ ಅದಾನಿ 10ನೇ ಸ್ಥಾನಕ್ಕೆ ಕುಸಿದಿದ್ದಾರೆ.

Read E-Paper click here