ಸೋಮವಾರ ತೀರ್ಪು ಪ್ರಕಟಿಸಿದ ವಾರಾಣಸಿ ಕೋರ್ಟ್, ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ.
ಅನ್ಸಾರಿ ಅವರು 1991ರಲ್ಲಿ ರಾಜಕೀಯವಾಗಿ ಪ್ರಾಮುಖ್ಯತೆ ಪಡೆಯುತ್ತಿರುವಾಗಲೇ, ಅವರ ವಿರುದ್ಧ ಕಾಂಗ್ರೆಸ್ ಮುಖಂಡರ ಕೊಲೆ ಆರೋಪವನ್ನು ಹೊರಿಸಲಾಗಿತ್ತು. ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಅಜಯ್ ರೈ ಅವರ ಸಹೋದರ ಅವಧೇಶ್ ರೈ ಅವರನ್ನು ವಾರಣಾಸಿಯಲ್ಲಿ ರೈ ಅವರ ಮನೆಯ ಹೊರಗೆ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಈ ಕೊಲೆ ನಡೆದಾಗ ಮುಕ್ತಾರ್ ಅನ್ಸಾರಿ ಅವರು ಶಾಸಕರಾಗಿರಲಿಲ್ಲ. ಈ ಕೊಲೆ ಪ್ರಕರಣದ ಎಫ್ಐಆರ್ನಲ್ಲಿ ಮುಖ್ತಾರ್ ಅನ್ಸಾರಿ, ಭೀಮ್ ಸಿಂಗ್, ಮಾಜಿ ಶಾಸಕ ಅಬ್ದುಲ್ ಕಲೀಂ ಮತ್ತು ಇತರ ಇಬ್ಬರನ್ನು ಹೆಸರಿಸಲಾಗಿತ್ತು.
ಮುಖ್ತಾರಿ ಅನ್ಸಾರಿ ಒಟ್ಟು 61 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಐದು ಬಾರಿ ಶಾಸಕನಾಗಿದ್ದ ಅನ್ಸಾರಿ, ಕಳೆದ ಏಪ್ರಿಲ್ ತಿಂಗಳಲ್ಲಿ ಮತ್ತೊಂದು ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಯನ್ನು ವಿಧಿಸಲಾಗಿತ್ತು.