Friday, 22nd November 2024

ಮುಕುಲ್ ರಾಯ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಮುಕುಲ್ ರಾಯ್‌ಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಕೋಲ್ಕತ್ತಾದ ಎಸ್ ಎಸ್ ಕೆ ಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಕುಲ್ ರಾಯ್‌ರನ್ನು ಸರಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಅವರ ಜೊತೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಇತರರು ಇದ್ದರು.

ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವನ್ನು ತೊರೆದು ನಾಲ್ಕು ವರ್ಷಗಳ ಹಿಂದೆ ಬಿಜೆಪಿಗೆ ಸೇರ್ಪಡೆಯಾಗಿ ಬಿಜೆಪಿ ಶಾಸಕರಾಗಿದ್ದ ಮತ್ತು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಕಳೆದ ಜೂನ್‌ ತಿಂಗಳಿನಲ್ಲಿ ಟಿಎಂಸಿಗೆ ಮತ್ತೆ ಸೇರ್ಪಡೆಯಾಗಿದ್ದರು.

ಮುಕುಲ್ ರಾಯ್‌ ಅವರು ತನ್ನ ಪತ್ನಿ ಸಾವನ್ನಪ್ಪಿದ ಬಳಿಕ ಹೆಚ್ಚು ಮೌನವಾಗಿ ಇರುತ್ತಾರೆ. ಇದು ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ,” ಎಂದು ಹೇಳಿದ್ದಾರೆ.

ಇನ್ನು ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಬಿಜೆಪಿಯ ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್‌ಗೆ ಮರಳುವ ಮುನ್ನ ಭಾರೀ ಚರ್ಚೆ ನಡೆದಿತ್ತು. ತೃಣಮೂಲ ಕಾಂಗ್ರೆಸ್‌ನ ಘರ್‌ ವಾಪಾಸಿ ಸಂದರ್ಭದಲ್ಲಿ ಹಲವಾರು ಮಂದಿ ಮತ್ತೆ ಟಿಎಂಸಿಗೆ ಸೇರ್ಪಡೆಯಾಗಿದ್ದರು.