ಮುಂಬೈ: ಸುಮಾರು 40 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರ ಮೃತದೇಹ ಗೊರೈ ಬೀಚ್‌ಗೆ (Gorai Beach) ಹೋಗುವ ಪಕ್ಕದ ರಸ್ತೆಯಲ್ಲಿ ಪತ್ತೆಯಾಗಿದೆ. ಏಳು ಭಾಗಗಳನ್ನಾಗಿ ಕತ್ತರಿಸಿದ ಮೃತದೇಹ ಪ್ಲಾಸ್ಟಿಕ್ ಬಾಕ್ಸ್‌ಗಳಲ್ಲಿ ತುಂಬಿಡಲಾಗಿತ್ತು (Mumbai horror). ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಮೃತದೇಹದ ಭಾಗಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಅದನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತ ವ್ಯಕ್ತಿಯ ಗುರುತು ಇನ್ನು ತಿಳಿದು ಬಂದಿಲ್ಲ.
ಭಾನುವಾರದಂದು ಗೊರೈ ಬೀಚಿನ ಬಳಿ ಇರುವ , ಪಿಕ್ಸಿ ಹೋಟೆಲ್ ಬಳಿ ಪುರುಷನ ಶವ ಪತ್ತೆಯಾಗಿದೆ. ದೇಹವನ್ನು ಏಳು ಭಾಗಗಳಾಗಿ ಕತ್ತರಿಸಿ ನಾಲ್ಕು ಪ್ಲಾಸ್ಟಿಕ್ ಬಾಕ್ಸ್ ಗಳಲ್ಲಿ ಪ್ಯಾಕ್ ಮಾಡಿ ಎಸೆಯಲಾಗಿದೆ. ಮೃತ ವ್ಯಕ್ತಿ25 ರಿಂದ 40 ವರ್ಷ ವಯಸ್ಸಿನವರಾಗಿರಬಹುದು ಎಂದು ಅಂದಾಜಿಸಲಾಗಿದೆ. ವ್ಯಕ್ತಿ ಕಡು ನೀಲಿ ಬಣ್ಣದ ಜೀನ್ಸ್ ಮತ್ತು ಕಪ್ಪು ಬೂಟುಗಳನ್ನು ಧರಿಸಿದ್ದು, ಆತನ ಬಲಗೈಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನ ಮೀರಾ ರಸ್ತೆಯ ನಿವಾಸಿ ಸಂತೋಷ್ ಶಿಂಧೆ (55) ಎಂಬುವರು ಘಟನೆಯ ಬಗ್ಗೆ ತಿಳಿದು ಗೊರೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಗೊರೈ ಪೊಲೀಸರು ಗ್ರಾಮದಿಂದ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ. ಪ್ರಸ್ತುತ ಫೋರೆನ್ಸಿಕ್ ತಂಡವು ಪ್ರಕರಣದ ತನಿಖೆ ನಡೆಸುತ್ತಿದ್ದು, ಘಟನಾ ಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ವಿಚಾರಣೆ ನಡೆಸುತ್ತಿದೆ. ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಮೃತದೇಹವನ್ನು ಗುರುತಿಸಲು ಸಹಾಯ ಮಾಡಲು ಸಿಸಿಟಿವಿ ದೃಶ್ಯಗಳು ಮತ್ತು ಹತ್ತಿರದ ಪೊಲೀಸ್ ಠಾಣೆಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಇದನ್ನೂ ಓದಿ: Murder Case: ಕಲಬುರಗಿಯಲ್ಲಿ ಮಹಿಳೆಯ ಭೀಕರ ಕೊಲೆ; ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮುಂಬೈನ ಭಗವತಿ ಆಸ್ಪತ್ರೆಗೆ ಕಳುಹಿಸಲಾಗಿದೆ, ನಾವು ಈ ವಿಷಯವನ್ನು ಇನ್ನೂ ತನಿಖೆ ಮಾಡುತ್ತಿರುವುದರಿಂದ ಕೊಲೆ ಏಕೆ ಆಗಿದೆ, ಏನಾಗಿದೆ ಎಂದು ತಕ್ಷಣ ಏನನ್ನೂ ತೀರ್ಮಾನಿಸಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಇತ್ತೀಚೆಗೆ ಟ್ರಕ್ ಒಂದರಲ್ಲಿ ದುರ್ವಾಸನೆ ಬೀರುತ್ತಿದ್ದ ಅಪರಿಚಿತ ಶವವನ್ನು ಮುಂಬೈ ಪೊಲೀಸರು ಪತ್ತೆ ಮಾಡಿದ್ದಾರೆ. ಮೃತ ವ್ಯಕ್ತಿ ಸುಮಾರು 40 ವರ್ಷದವನಾಗಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ದುರ್ವಾಸನೆ ಬರುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಅಪರಿಚಿತ ಶವದ ಗುರುತನ್ನು ಪತ್ತೆ ಹಚ್ಚಲು ಪೊಲೀಸರು ಯತ್ನಿಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.