ಮುಂಬೈ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ದುರ್ಬಲ ವಹಿವಾಟಿನ ಪರಿಣಾಮ ಸೋಮವಾರ ಷೇರುಪೇಟೆ 587 ಅಂಕ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.
ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ 586.66 ಅಂಕಗಳಷ್ಟು ಇಳಿಕೆಯಾಗಿ, 52,533.40 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಳಿ ಸಿದೆ. ಎನ್ ಎಸ್ ಇ ನಿಫ್ಟಿ 171 ಅಂಕ ಕುಸಿತವಾಗಿದ್ದು, 15,752.40ರ ಗಡಿಗೆ ಕುಸಿದಿದೆ. ಸೆನ್ಸೆಕ್ಸ್ ಇಳಿಕೆಯಿಂದ ಎಚ್ ಡಿಎಫ್ ಸಿ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಆಯಕ್ಸಿಸ್ ಬ್ಯಾಂಕ್, ಎಚ್ ಡಿಎಫ್ ಸಿ, ಮಾರುತಿ ಮತ್ತು ಬಜಾಜ್ ಫೈನಾನ್ಸ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಎನ್ ಟಿಪಿಸಿ, ನೆಸ್ಲೆ ಇಂಡಿಯಾ, ಡಾ.ರೆಡ್ಡೀಸ್ ಮತ್ತು ಸನ್ ಫಾರ್ಮಾ ಷೇರುಗಳು ಲಾಭ ಗಳಿಸಿದೆ.
ದೇಶೀಯ ಈಕ್ವಿಟಿ ಮಾರಾಟದಲ್ಲಿ ಭಾರೀ ಇಳಿಕೆಯಾದ ಪರಿಣಾಮ ಸೆನ್ಸೆಕ್ಸ್, ನಿಫ್ಟಿ ಕುಸಿತಕ್ಕೆ ಕಾರಣವಾಗಿದೆ ಎಂದು ಬಿನೋದ್ ಮೋದಿ ವಿಶ್ಲೇಷಿಸಿದ್ದಾರೆ.