Thursday, 12th December 2024

ಕೆ.ಅಣ್ಣಾಮಲೈ ಪರ ತಮಿಳುನಾಡಿನಲ್ಲಿ ಶಾಸಕ ಮುನಿರತ್ನ ಪ್ರಚಾರ

ಚೆನ್ನೈ: ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದಲ್ಲಿ ವ್ಯಸ್ತರಾಗಿದ್ದಾರೆ.

ಬುಧವಾರ ಅರವಕುರಿಚಿ ವಿಧಾನಸಭಾ ಕ್ಷೇತ್ರದ ಪಲ್ಲಪಟ್ಟಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಬಿಜೆಪಿ ಅಭ್ಯರ್ಥಿ ಕೆ.ಅಣ್ಣಾಮಲೈ ಪರವಾಗಿ ಮತ ಯಾಚಿಸಿದರು. ಕರ್ನಾಟಕ ಕೆಡರ್‌ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಪಕ್ಷ ಸೇರಿದ್ದಾರೆ. ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾದ ಅವರಿಗೆ ಕರೂರು ಜಿಲ್ಲೆಯ ಅರವಾಕು ರುಚಿ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ.

ಅರವಾಕುರುಚಿ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಜನರೇ ಹೆಚ್ಚಾಗಿದ್ದಾರೆ. ಮುನಿರತ್ನ ಅವರಿಗೆ ಪಕ್ಷ ಕೆ. ಅಣ್ಣಾಮಲೈ ಪರವಾಗಿ ಪ್ರಚಾರ ನಡೆಸುವ ಜವಾಬ್ದಾರಿ ನೀಡಿದೆ. ಅಣ್ಣಾಮಲೈ ಅವರನ್ನು ಚುನಾಯಿಸಬೇಕು ಎಂದು ಮುನಿರತ್ನ ಮನವಿ ಮಾಡುತ್ತಿದ್ದಾರೆ.

ತಮಿಳುನಾಡು ಚುನಾವಣೆಯಲ್ಲಿ ಬಿಜೆಪಿ ಎಐಎಡಿಎಂಕೆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದೆ. 2016ರಲ್ಲಿ ನಡೆದ ಚುನಾವಣೆ ಯಲ್ಲಿ ಬಿಜೆಪಿ ಒಂದು ಸ್ಥಾನ ಸಹ ಗೆದ್ದಿರಲಿಲ್ಲ. ಈ ಬಾರಿ ಎನ್‌ಡಿಎ ಮೈತ್ರಿಕೂಟ ಗೆಲುವಿನ ನಿರೀಕ್ಷೆಯಲ್ಲಿದೆ. ತಮಿಳುನಾಡು  ವಿಧಾನಸಭೆ ಚುನಾವಣೆ ಪ್ರಚಾರ ಕಣ ರಂಗೇರಿದೆ. ಏಪ್ರಿಲ್ 6ರಂದು ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟ ವಾಗಲಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily