Thursday, 12th December 2024

ಸ್ಲೋವಾಕಿಯಾದ ಪ್ರಧಾನಿ ಹತ್ಯೆಯ ಯತ್ನ: ಪ್ರಧಾನಿ ಮೋದಿ ಖಂಡನೆ

ವದೆಹಲಿ:‌ ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಅವರ ಹತ್ಯೆಯ ಯತ್ನಕ್ಕೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಇದು ಹೇಡಿತನದ ಕೃತ್ಯ ಎಂದು ಖಂಡಿಸಿದ್ದಾರೆ.

‘ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೋ ಅವರ ಮೇಲೆ ಗುಂಡಿನ ದಾಳಿಯ ಸುದ್ದಿಯಿಂದ ತೀವ್ರ ಆಘಾತವಾಗಿದೆ. ಈ ಕೃತ್ಯವನ್ನು ಬಲವಾಗಿ ಖಂಡಿಸುತ್ತೇನೆ. ಪ್ರಧಾನಿ ಫಿಕೊ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸ್ಲೋವಾಕಿಯಾ ಪರವಾಗಿ ಭಾರತವು ನಿಲ್ಲುತ್ತದೆ’ ಎಂದು ಬರೆದುಕೊಂಡಿದ್ದಾರೆ.

ಯುರೋಪ್‌ನ ಸಣ್ಣ ದೇಶ ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಬುಧವಾರ (ಮೇ.15) ಬೆಂಬಲಿಗರ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ದಾಳಿಯಿಂದ ಫಿಕೊ ಅವರ ಹೊಟ್ಟೆಗೆ ಗಂಭೀರ ಗಾಯಗಳಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಬನ್‌ಸ್ಕಾ ಬಿಸ್ಟ್ರಿಕಾ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಶಂಕಿತನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.