Sunday, 8th September 2024

ಒಂದನೇ ಹಂತದ ಮತ ಎಣಿಕೆ ಮುಕ್ತಾಯ: ಮುರ್ಮು ಮುನ್ನಡೆ

ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಹುದ್ದೆ ಯಾರಿಗೆ ಒಲಿಯಲಿದೆ ಎಂಬ ಬಗ್ಗೆ ಇನ್ನು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬರಲಿದೆ.

ಒಂದನೇ ಹಂತದ ಮತ ಎಣಿಕೆ ಮುಗಿದಿದ್ದು, ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆಯ ನಂತರ ಮುರ್ಮ ಅವರಿಗೆ 540 ಮತಗಳು ಲಭಿಸಿದೆ. ಇವರ ಒಟ್ಟು ಮತದ ಮೌಲ್ಯ 3,78,000 ಆಗಿವೆ. ಯಶವಂತ ಸಿನ್ಹಾ ಅವರಿಗೆ 1,45,600 ಮೌಲ್ಯದ 208 ಮತಗಳು ಲಭಿಸಿದೆ.

ದ್ರೌಪದಿ ಮುರ್ಮು ಅವರಿಗೆ ಒಡಿಶಾದ ಆಡಳಿತ ಪಕ್ಷ ಬಿಜು ಜನತಾ ದಳ (ಬಿಜೆಡಿ), ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ (YSRCP), ಬಹುಜನ ಸಮಾಜ ಪಕ್ಷ (BSP), ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK), ತೆಲುಗು ದೇಶಂ ಪಕ್ಷ (TDP), ಜನತಾ ದಳ (ಜಾತ್ಯತೀತ), ಶಿರೋಮಣಿ ಅಕಾಲಿದಳ, ಶಿವಸೇನೆಯ ಎರಡೂ ಸತ್ಯಗಳು ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಬೆಂಬಲವಿದೆ.

ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಕಾಂಗ್ರೆಸ್, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ಆಮ್ ಆದ್ಮಿ ಪಕ್ಷ, ಸಮಾಜವಾದಿ ಪಕ್ಷ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಬೆಂಬಲಿಸಿವೆ.

ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜು.24 ರಂದು ಕೊನೆಗೊಳ್ಳ ಲಿದೆ. ಹೊಸದಾಗಿ ಆಯ್ಕೆಯಾಗುವ ರಾಷ್ಟ್ರಪತಿ ಇದೇ 25 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಒಂದು ವೇಳೆ ದ್ರೌಪದಿ ಮುರ್ಮ ಅವರು ರಾಷ್ಟ್ರಪತಿಯಾಗಿ ಚುನಾಯಿತ ರಾದರೆ ದೇಶದ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಈ ಹುದ್ದೆ ಏರಿರುವ ಕೀರ್ತಿಗೆ ಭಾಜನರಾಗಲಿದ್ದಾರೆ.

error: Content is protected !!