ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಅಧ್ಯಕ್ಷ ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ರನ್ನು ಸೆಂಟ್ರಲ್ ಹಾಲ್‌ಗೆ ಕರೆದೊಯ್ದರು.
ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಸೆಂಟ್ರಲ್ ಹಾಲ್‌ನಲ್ಲಿ ಮೊದಲ ಭಾಷಣ ಮಾಡಿದರು.
ಕಳೆದ ಜುಲೈ 21ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ 64 ವರ್ಷದ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಆಯ್ಕೆಯಾದ ಮೊದಲ ಬುಡಕಟ್ಟು ಸಮುದಾಯದ ನಾಯಕಿ ಎಂಬ ಹೊಸ ಇತಿಹಾಸವನ್ನು ದ್ರೌಪದಿ ಮುರ್ಮು ಬರೆದರು.
ಮುರ್ಮು ಸ್ವಾತಂತ್ರ್ಯದ ನಂತರ ಜನಿಸಿದ ಮೊದಲ ಅಧ್ಯಕ್ಷ ಮತ್ತು ಉನ್ನತ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದು, ಭಾರತದ ಮೊದಲ ಪ್ರಜೆಯಾದ ಎರಡನೇ ಮಹಿಳೆ ಎನಿಸಿಕೊಂಡಿದ್ದಾರೆ.