ಗುವಾಹಟಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಅಸ್ಸಾಂನಲ್ಲಿ ನಿರ್ಮಿಸಲಾದ ಧ್ರುಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ನಂತರ ಅಗ್ಯಥೂರಿಗೆ ತೆರಳಿ, ನೂತನ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.
ಎರಡು ದಿನಗಳ ಅಸ್ಸಾಂ ಭೇಟಿ ಇದಾಗಿದ್ದು, ಈಗಾಗಲೇ ಗುವಾಹಟಿಗೆ ಆಗಮಿಸಿದ್ದಾರೆ.
ಕೇಂದ್ರೀಯ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಅಸ್ಸಾಂ ಸರ್ಕಾರದ ವಿವಿಧ ಯೋಜನೆಗಳಿಗೆ ಜೊತೆಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ರೈಲ್ವೆಗಳ ಕೇಂದ್ರ ಸಚಿವಾಲಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.