Thursday, 12th December 2024

ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ತಮ್ಮ ಹೆಸರನ್ನು ಸೂಚಿಸಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕ್ನೊ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಸೂಚಿಸಿಲ್ಲ ಎಂದು ಅಧ್ಯಕ್ಷೀಯ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ.

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ತಮ್ಮ ಹೆಸರನ್ನು ಎಂದಿಗೂ ಸೂಚಿಸಿಲ್ಲ ಹಾಗೂ ಇದು ವದಂತಿ ಎಂದು ಖರ್ಗೆ ಹೇಳಿದರು.

ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ನನ್ನ ಹೆಸರನ್ನು ಸೂಚಿಸಿರುವುದು ವದಂತಿ, ನಾನು ಇದನ್ನು ಯಾವತ್ತೂ ಹೇಳಿಲ್ಲ. ಗಾಂಧಿ ಕುಟುಂಬದವರು ಯಾರೂ ಚುನಾವಣೆಯ ಭಾಗವಾಗುವುದಿಲ್ಲ ಅಥವಾ ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸು ವುದಿಲ್ಲ.

ಪ್ರಮುಖವಾಗಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ನಡುವೆ ಪೈಪೋಟಿ ಏರ್ಪಟ್ಟಿದೆ.

ಸೋನಿಯಾ ಅವರು ಪಕ್ಷದ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಹಾಗೂ ಯಾವುದೇ ಅಭ್ಯರ್ಥಿಯ ಬೆಂಬಲಕ್ಕೆ ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ” ಎಂದು ಖರ್ಗೆ ಹೇಳಿದರು.