Sunday, 15th December 2024

ನೂತನ ಸಿಜೆಐ ಆಗಿ ಎನ್‌ವಿ ರಮಣ ನೇಮಕ

ನವದೆಹಲಿ: ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ (ಸಿಜೆಐ) ಎನ್‌ವಿ ರಮಣ ಅವರನ್ನು ನೇಮಿಸ ಲಾಗಿದೆ. ಹಾಲಿ ಸಿಜೆಐ ಶರದ್ ಅರವಿಂದ್ ಬೋಬ್ಡೆ ಅವರ ಅಧಿಕಾರಾವಧಿ ಏ.23ರಂದು ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಉತ್ತರಾಧಿಕಾರಿಯನ್ನಾಗಿ ಎನ್‌ವಿ ರಮಣ ಅವರನ್ನು ನೇಮಕ ಮಾಡಲಾಗಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ಆದೇಶ ಹೊರಡಿಸಿದ್ದು, ಏ.24ರಿಂದ ಜಾರಿಯಾಗುವಂತೆ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಎನ್‌ವಿ ರಮಣ ಅವರನ್ನು ನೇಮಕ ಮಾಡಲಾಗಿದೆ.

ಆಂಧ್ರಪ್ರದೇಶ ಮೂಲದ ನೂತಲಪತಿ ವೆಂಕಟ ರಮಣ ಅವರು ಸುಪ್ರೀಂಕೋರ್ಟ್‌ನ 48ನೇ ಮುಖ್ಯ ನ್ಯಾಯಮೂರ್ತಿಯಾಗ ಲಿದ್ದು, 2022ರ ಆಗಸ್ಟ್ 26ರಂದು ನಿವೃತ್ತರಾಗಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೋಬ್ಡೆ ಅವರು ಸಂಪ್ರದಾಯದಂತೆ ತಮ್ಮ ನಂತರದ ಅತಿ ಹಿರಿಯ ನ್ಯಾಯಮೂರ್ತಿ ಎನ್‌ವಿ ರಮಣ ಹೆಸರನ್ನು ಮುಂದಿನ ಸಿಜೆಐ ಹುದ್ದೆಗೆ ಕಳೆದ ತಿಂಗಳು ಶಿಫಾರಸು ಮಾಡಿದ್ದರು.

ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ಎನ್‌ವಿ ರಮಣ ಅವರನ್ನು 2014ರ ಫೆಬ್ರವರಿ 17ರಂದು ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಮಾಡಲಾಗಿತ್ತು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily