Saturday, 23rd November 2024

ನಾಗಾಲ್ಯಾಂಡ್‌ ಸಿಎಂ ಪ್ರಮಾಣವಚನ ಸ್ವೀಕಾರ

ಕೊಹಿಮಾ: ನಾಗಾಲ್ಯಾಂಡ್‌ನಲ್ಲಿ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯ ನೇಫಿಯು ರಿಯೊ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ಲಾ.ಗಣೇಶನ್‌ ಅವರು ನೇಫಿಯು ರಿಯೊ ಅವರಿಗೆ ಪ್ರಮಾಣವಚನ ಬೋಧಿಸಿದರು. ಜೊತೆಗೆ 9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇಬ್ಬರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ನಾಗಾಲ್ಯಾಂಡ್ ಚುನಾವಣೆಯಲ್ಲಿ ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟ 60 ಸದಸ್ಯ ಬಲದ ವಿಧಾನಸಭೆಯಲ್ಲಿ 37 ಸ್ಥಾನಗಳನ್ನು ಗೆದ್ದುಕೊಂಡಿತ್ತು. ರಾಜ್ಯದ ಎಲ್ಲಾ ಇತರ ಪಕ್ಷಗಳು ರಿಯೊ ನೇತೃತ್ವದ ಮೈತ್ರಿಕೂಟಕ್ಕೆ ತಮ್ಮ ಬೆಂಬಲ ಸೂಚಿಸಿವೆ.

ಎನ್‌ಡಿಪಿಪಿ 25, ಬಿಜೆಪಿ 12, ಎನ್‌ಪಿಎಫ್‌ 5, ಎನ್‌ಸಿಪಿ 7, ಲೋಕ ಜನಶಕ್ತಿ ಪಕ್ಷ (ರಾಮ್‌ ವಿಲಾಸ್) 2, ಕೇಂದ್ರ ಸಚಿವ ರಾಮದಾಸ್ ಆಠವಳೆ ನೇತೃತ್ವದ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ (ಆರ್‌ಪಿ) 2 ಹಾಗೂ ಪಕ್ಷೇತರರು 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.