Saturday, 14th December 2024

ನಾಗ್ಪುರದಲ್ಲಿ ಶಿಕ್ಷಕಿ, ಶಾಲಾ ವಿದ್ಯಾರ್ಥಿಗಳಿಂದ ರಾಮನ ಭಜನೆಗೆ ನೃತ್ಯ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಶಾಲಾ ವಿದ್ಯಾರ್ಥಿಗಳು ರಾಮನ ಭಜನೆಗೆ ನೃತ್ಯ ಮಾಡಿದ್ದು, ಮಕ್ಕಳ ಜೊತೆಗೆ ಶಿಕ್ಷಕಿ ಹೆಜ್ಜೆ ಹಾಕಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಈಗಾಗಲೇ ಧಾರ್ಮಿಕ ವಿಧಿವಿಧಾನಗಳು ಅರಂಭಗೊಂಡಿವೆ. ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ.

ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಸಂಭ್ರಮ ಮನೆ ಮಾಡಿದ್ದು, ಹಬ್ಬದ ವಾತಾವರಣ ಮನೆ ಮಾಡಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ರಾಮ್ ಆಯೇಂಗೆ ಭಜೆನೆಗೆ ಶಿಕ್ಷಕಿ ಜೊತೆ ವಿದ್ಯಾರ್ಥಿಗಳು ಹೆಜ್ಜೆ ಹಾಕುತ್ತಿರುವುದನ್ನು ನೋಡಬಹುದಾಗಿದೆ.

ಶಿಕ್ಷಕಿಯೂ ಡಾನ್ಸ್ ಮಾಡುವುದನ್ನು ನೋಡುತ್ತಾ ವಿದ್ಯಾರ್ಥಿಗಳು ಕೂಡ ನೃತ್ಯ ಮಾಡುವುದು ಸ್ಪಷ್ಟವಾಗಿ ಕಾಣಬಹುದಾಗಿದೆ. ವಿಡಿಯೋ ನೋಡಿದ ನೆಟ್ಟಿಗರು ದಿನದ ಅತ್ಯುತ್ತಮ ವಿಡಿಯೋ, ದೇಶ ಬದಲಾಗುತ್ತಿದೆ ಎಂದು ಕಮೆಂಟ್​ ಮಾಡಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳಿಗಿಂತ ಹೆಚ್ಚು ಆನಂದಿಸುತ್ತಿದ್ದಾ ರೆಂದು ತೋರುತ್ತದೆ.