ದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ದು ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಜೂ.12ಕ್ಕೆ ಮುಂದೂಡಿಕೆ ಯಾಗಿದೆ.
ವೇಳಾಪಟ್ಟಿಯಂತೆ ಜೂ.9ರಂದು ಚಂದ್ರಬಾಬು ನಾಯ್ದು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆಯೋಜಿಸಲಾಗಿತ್ತು. ಆದರೆ ಜೂ.8ರಂದು ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನಲೆ, ಚಂದ್ರಬಾಬು ನಾಯ್ದು ತಮ್ಮ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಿದ್ದಾರೆ ಎಂದು ವರದಿಯಾಗಿದೆ.
ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲು ಟಿಡಿಪಿ ಹಾಗೂ ಜೆಡಿಯು ಬೆಂಬಲ ನೀಡಿವೆ. ಈ ಹಿನ್ನಲೆಯಲ್ಲಿ ಅಮರಾವತಿಯಲ್ಲಿ ಜೂನ್ 9ರಂದು ನಡೆಯಬೇಕಿದ್ದ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಜೂನ್ 12ಕ್ಕೆ ಮುಂದೂಡಿದ್ದಾರೆ.
ಚಂದ್ರಬಾಬು ನಾಯ್ದು ನೇತೃತ್ವದ ಟಿಡಿಪಿ, ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಹಾಗೂ ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಆಂಧ್ರಪ್ರದೇಶದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.