Friday, 22nd November 2024

ರೈಲಿನಲ್ಲಿ ನಮಾಜ್: ರೈಲ್ವೇ ಅಧಿಕಾರಿಗಳಿಗೆ ದೂರು

ಖನೌ: ರೈಲಿನಲ್ಲಿ ನಾಲ್ವರು ಮುಸ್ಲಿಮರು ನಮಾಜ್ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ದೂರು ನೀಡಲಾಗಿದೆ.

ಖಡ್ಡಾ ರೈಲು ನಿಲ್ದಾಣದಲ್ಲಿ ರೈಲು ನಿಂತಾಗ ನಮಾಜ್ ಮಾಡುತ್ತಿದ್ದ ವಿಡಿಯೊವನ್ನು ಉತ್ತರ ಪ್ರದೇಶದ ಮಾಜಿ ಶಾಸಕ ದೀಪಲಾಲ್ ಭಾರ್ತಿ ಚಿತ್ರೀಕರಿಸಿದ್ದಾರೆ.

ಸತ್ಯಾಗ್ರಹ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ನಾಲ್ವರು ರೈಲಿನಲ್ಲಿ ಜನರು ಓಡಾಡುವ ಮಾರ್ಗ ಬಂದ್ ಮಾಡಿ ನಮಾಜ್ ಮಾಡುತ್ತಿದ್ದರು ಎಂದು ಮಾಜಿ ಶಾಸಕರು ತಿಳಿಸಿದ್ದಾರೆ.

‘ಸ್ಲೀಪರ್ ಕೋಚ್‌ನಲ್ಲಿ ನಮಾಜ್ ಮಾಡುತ್ತಿದ್ದ ವಿಡಿಯೊವನ್ನು ನಾನು ಚಿತ್ರೀಕರಿಸಿದೆ. ಅವರ ವರ್ತನೆಯಿಂದಾಗಿ ಸಹ ಪ್ರಯಾಣಿಕರಿಗೆ ತೊಂದರೆ ಆಗುತ್ತಿತ್ತು. ಪ್ರಯಾಣಿಕರು ರೈಲಿನ ಒಳಬರಲು ಅಥವಾ ಹೊರ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಅವರು ಹೇಗೆ ನಮಾಜ್ ಮಾಡುತ್ತಾರೆ? ಅದು ತಪ್ಪು’ಎಂದು ಹೇಳಿದ್ದಾರೆ.

ಈ ಸಂಬಂಧ ಭಾರತೀಯ ರೈಲ್ವೇ ಅಧಿಕಾರಿಗಳಿಗೆ ದೂರು ನೀಡಿದ್ದು, ಕ್ರಮಕ್ಕೆ ಒತ್ತಾಯಿಸಿ ದ್ದಾರೆ. ಈ ಹಿಂದೆ, ಲಖನೌದ ಲುಲು ಮಾಲ್‌ನಲ್ಲಿ ಜನರ ಗುಂಪೊಂದು ನಮಾಜ್ ಮಾಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ವಿವಾದ ಭುಗಿಲೆದ್ದಿತ್ತು.