ಇದೀಗ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಶ್ ಧನ್ಕರ್ ಉಪರಾಷ್ಟ್ರಪತಿ ಅಭ್ಯರ್ಥಿ ಯಾಗಿರುವ ಹಿನ್ನೆಲೆಯಲ್ಲಿ ಮಮತಾ ಸರ್ಕಾರಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಮಾಸ್ಟರ್ ಸ್ಟ್ರೋಕ್ ನೀಡಲಿದೆ. ಮುಕ್ತಾರ್ ಅಬ್ಬಾಸ್ ನಕ್ವಿ ಅವರನ್ನು ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗುತ್ತಿದೆ ಎಂದು ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಪರಾಭವದ ಬಳಿಕ ನಡೆದ ಇತರೆ ಚುನಾವಣೆಗಳಲ್ಲೂ ಬಿಜೆಪಿ ಗಮನಾರ್ಹ ಸಾಧನೆ ಮಾಡಿಲ್ಲ. ಹೀಗಾಗಿ ಉತ್ತರ ಪ್ರದೇಶದ ಪ್ರಭಾವಿ ಶಿಯಾ ಮುಸ್ಲಿಂ ಮುಖಂಡ ಮುಕ್ತಾರ್ ಅಬ್ಬಾಸ್ ನಕ್ವಿಯವರನ್ನು ಪಶ್ಚಿಮ ಬಂಗಾಳ ರಾಜ್ಯಪಾಲರನ್ನಾಗಿಸುವ ಲೆಕ್ಕಾಚಾರವನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಹೇಳಲಾಗಿದೆ.