Tuesday, 22nd October 2024

ಮೊದಲಿಗೆ ಪ್ರಮಾಣ ವಚನ ಸ್ವೀಕರಿಸಿದ ನಾರಾಯಣ ರಾಣೆ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಕೇಂದ್ರ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮೊದಲಿಗೆ ನಾರಾಯಣ ರಾಣೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನೂತನ ಸಚಿವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಮಾಣವಚನ ಬೋಧಿಸಿದರು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಸರ್ಬಾನಂದ್ ಸೋನೋವಾಲ್ ಅವರು ಎರಡನೇಯವರಾಗಿ, ನಂತರ ಡಾ. ವೀರೇಂದ್ರ ಕುಮಾರ್, ಜ್ಯೋತಿರಾಧಿತ್ಯ ಸಿಂಧ್ಯಾ ಪ್ರಮಾಣ ವಚನ ಸ್ವೀಕರಿಸಿದರು.