Wednesday, 18th September 2024

Narendra Modi: ಗಣಪತಿಯನ್ನೇ ಜೈಲು ಕಂಬಿಯ ಹಿಂದೆ ಇಟ್ಟಿದ್ದಾರೆ- ಮಂಡ್ಯ ಗಲಭೆ ಬಗ್ಗೆ ಮೋದಿ ರಿಯಾಕ್ಟ್‌

Narendra Modi

ಕುರುಕ್ಷೇತ್ರ: ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಭಾರೀ ಹಿಂಸಾಚಾರ(Mandya Violence)ದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಪ್ರತಿಕ್ರಿಯಿಸಿದ್ದಾರೆ. ಗಣಪತಿಯನ್ನೇ ಜೈಲು ಕಂಬಿಗಳ ಹಿಂದೆ ಇಟ್ಟಿರುವಂತಹ ರಾಜಕೀಯ ನಮ್ಮಲ್ಲಿದೆ ಎಂದು ಕಿಡಿಕಾರಿದ್ದಾರೆ. ಹರಿಯಾಣದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್‌(Congress) ವಿರುದ್ಧ ಕಿಡಿ ಕಾರಿದರು.

ನಾಗಮಂಗಲ ಘಟನೆಯನ್ನು ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದಾಗ ಗಣೇಶನ ಮೂರ್ತಿಯನ್ನೇ ಪೊಲೀಸರು ಸೀಜ್‌ ಮಾಡಿರುವ ಘಟನೆಯನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಒಲೈಕೆ ರಾಜಕಾರಣ ಕಾಂಗ್ರೆಸ್‌ನ ಪ್ರಮುಖ ಗುರಿಯಾಗಿದೆ. ಕಾಂಗ್ರೆಸ್‌ ಆಡಳಿತವಿರುವ ಕರ್ನಾಟಕದಲ್ಲಿ ಕೆಲ ಹೊತ್ತು ಗಣೇಶನ ಮೂರ್ತಿಯನ್ನೇ ಪೊಲೀಸರು ಸೀಜ್‌ ಮಾಡಿ ಸ್ಟೇಷನ್‌ನಲ್ಲಿಡುವಂತಹ ಸ್ಥಿತಿ ನಿರ್ಮಾಣಗೊಂಡಿದೆ ಎಂದು ಕಿಡಿ ಕಾರಿದ್ದಾರೆ.

ಇಡೀ ದೇಶ ಇಂದು ಗಣೇಶ ಉತ್ಸವವನ್ನು ಆಚರಿಸುತ್ತಿದೆ ಮತ್ತು ಕಾಂಗ್ರೆಸ್ ಅದಕ್ಕೆ ಅಡ್ಡಿಪಡಿಸುತ್ತಿದೆ. ಇಂದು ಅದೇ ಹಳೆಯ ಕಾಂಗ್ರೆಸ್ ಅಲ್ಲ, ಇಂದಿನ ಕಾಂಗ್ರೆಸ್ ನಗರ ನಕ್ಸಲ್‌ನ ಹೊಸ ರೂಪವಾಗಿದೆ. ಇನ್ನು ಕಾಂಗ್ರೆಸ್‌ಗೆ ಸುಳ್ಳು ಹೇಳಲು ನಾಚಿಕೆಯಾಗುವುದಿಲ್ಲ ಎಂದು ಮೋದಿ ಆರೋಪಿಸಿದ್ದಾರೆ.

ಏನಿದು ಘಟನೆ?

ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿ ಪೆಟ್ರೋಲ್‌ ಬಾಂಬ್‌ ಎಸೆದು ದಾಂಧಲೆ ನಡೆಸಿದ್ದರಿಂದ ನಾಗಮಂಗಲ(Nagamangala) ದ ಬದರಿಕೊಪ್ಪಲಿನಲ್ಲಿಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಬುಧವಾರ ಸಂಜೆ ಅದ್ಧೂರಿ ಗಣಪತಿ ವಿಸರ್ಜನಾ ಮೆರವಣಿಗೆ ನಡೆಸುವ ವೇಳೆ ಈ ಘಟನೆ ನಡೆದಿದೆ. ನಾಗಮಂಗಲದ ಮೈಸೂರು ರಸ್ತೆ(Mysore road)ಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದರು. ಈ ವೇಳೆ ಹಿಂದು-ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟ ನಡೆದಿತ್ತು. ಬಳಿಕ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.

ಇನ್ನು ದುಷ್ಕರ್ಮಿಗಳ ಗುಂಪು ಅಂಗಡಿ, ಅಂಗಡಿ ಮುಂದಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದರು. ಅಷ್ಟೇ ಅಲ್ಲದೆ ರಸ್ತೆ ಮಧ್ಯೆ ಕತ್ತಿ ಹಿಡಿದು ಝಳಪಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸುಮಾರು 46 ಮಂದಿಯನ್ನುಅರೆಸ್ಟ್‌ ಮಾಡಿದ್ದಾರೆ. ಪ್ರಸ್ತುತ ಪ್ರದೇಶದಲ್ಲಿ 144ಸೆಕ್ಷನ್‌ ಜಾರಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಗಮಂಗಲದ ಶಾಲಾ, ಕಾಲೇಜುಗಳಿಗೆ ಗುರುವಾರ ರಜೆ ಘೊಷಿಸಲಾಗಿದೆ.

ಈ ಸುದ್ದಿಯನ್ನೂ ಓದಿ: ದೇಶದಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಬೇಡಿಕೆ, ವಿದೇಶಕ್ಕೆ ತೆರಳುವ ಅಗತ್ಯವಿಲ್ಲ: ಪ್ರಧಾನಿ ನರೇಂದ್ರ ಮೋದಿ

Leave a Reply

Your email address will not be published. Required fields are marked *