Thursday, 12th December 2024

74ನೇ ಗಣರಾಜ್ಯೋತ್ಸವ: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ

ವದೆಹಲಿ: ದೇಶದಲ್ಲಿ ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

‘ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು. ಈ ಸಂದರ್ಭವು ಹೆಚ್ಚು ವಿಶೇಷವಾಗಿದೆ. ಏಕೆಂದರೆ, ನಾವು ಇದನ್ನು ಆಜಾದಿ ಕಾ ಅಮೃತ್ ಮಹೋತ್ಸವದ ಸಮಯದಲ್ಲಿ ಆಚರಿಸುತ್ತಿದ್ದೇವೆ. ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾವು ಒಗ್ಗಟ್ಟಿ ನಿಂದ ಮುನ್ನಡೆಯಬೇಕೆಂದು ನಾನು ಬಯಸುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡುವ ಮೂಲಕ ದಿನದ ಸಮಾರಂಭ ಗಳನ್ನು ಪ್ರಾರಂಭಿಸುತ್ತಾರೆ. ಅಲ್ಲಿ ಅವರು ದೇಶಕ್ಕಾಗಿ ಮಡಿದ ವೀರರಿಗೆ ಗೌರವ ಸಲ್ಲಿಸಲು ರಾಷ್ಟ್ರವನ್ನು ಮುನ್ನಡೆಸುತ್ತಾರೆ.

ಪ್ರತಿ ಸೇವೆಯಿಂದ ಏಳು ಸೈನಿಕರಿಂದ ಇಂಟರ್-ಸರ್ವಿಸ್ ಗಾರ್ಡ್‌ಗಳನ್ನು ರಚಿಸಲಾಗುತ್ತದೆ. ನಂತರ, ಪ್ರಧಾನ ಮಂತ್ರಿ ಮತ್ತು ಇತರ ಗಣ್ಯರು ಮೆರವಣಿಗೆಯನ್ನು ವೀಕ್ಷಿಸಲು ಕರ್ತವ್ಯ ಪಥದಲ್ಲಿ ವಂದನಾ ವೇದಿಕೆಗೆ ಹೋಗುತ್ತಾರೆ.

ಈ ವರ್ಷದ ಗಣರಾಜ್ಯೋತ್ಸವವು ದೇಶದ ಸೇನಾ ಸಾಮರ್ಥ್ಯ, ಸಾಂಸ್ಕೃತಿಕ ವೈವಿಧ್ಯತೆ ಮತ್ತು ಇತರ ಹಲವು ವಿಶಿಷ್ಟ ಉಪಕ್ರಮಗಳಿಗೆ ಸಾಕ್ಷಿಯಾಗಲಿದೆ.

ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ಗಣರಾಜ್ಯೋತ್ಸವ ಪರೇಡ್‌ಗೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದಾರೆ.