Friday, 22nd November 2024

ಜ.23ರಂದು ರಾಷ್ಟ್ರೀಯ ರಜಾದಿನವೆಂದು ಘೋಷಿಸಲು ಒತ್ತಾಯ

ಕೋಲ್ಕತ್ತಾ: ನೇತಾಜಿ ಸುಭಾಷ್ ಚಂದ್ರ ಬೋಸ್‌ರ 125 ನೇ ಜನ್ಮದಿನದ ಸಂಭ್ರಮಾಚರಣೆಯಲ್ಲಿ ನಮನ ಸಲ್ಲಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನೇತಾಜಿ ಜನ್ಮದಿನ ವಾದ ಜನವರಿ 23 ಅನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಲು ಕೇಂದ್ರ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.

ಸರಣಿ ಟ್ವೀಟ್‌ ಮಾಡಿ, ನೇತಾಜಿ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಲು ನಾವು ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಇಡೀ ರಾಷ್ಟ್ರವು ರಾಷ್ಟ್ರೀಯ ನಾಯಕರಿಗೆ ಗೌರವ ಸಲ್ಲಿಸಲು ಮತ್ತು #DeshNayakDibas ಅನ್ನು ಅತ್ಯಂತ ಸೂಕ್ತವಾದ ರೀತಿಯಲ್ಲಿ ಆಚರಿ ಸಲು ಅನುವು ಮಾಡಿಕೊಡುತ್ತದೆ,” ಎಂದು ಹೇಳಿದ್ದಾರೆ.

ಈ ಹಿಂದೆಯೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಲವು ಬಾರಿ ಇದೇ ಬೇಡಿಕೆಯನ್ನು ಮುಂದಿಟ್ಟಿದ್ದರು. ಈ ವರ್ಷವೂ ಇಡೀ ರಾಷ್ಟ್ರವು ರಾಷ್ಟ್ರೀಯ ನಾಯಕ ನಿಗೆ ಗೌರವ ಸಲ್ಲಿಸಲು ಮತ್ತು ಅತ್ಯಂತ ಸೂಕ್ತವಾದ ರೀತಿಯಲ್ಲಿ ಆಚರಿಸಲು ಅವಕಾಶ ನೀಡುವಂತೆ ವಿನಂತಿ ಮಾಡಿದ್ದಾರೆ.

“ಪಶ್ಚಿಮ ಬಂಗಾಳ ಸರ್ಕಾರವು ತನ್ನ 125 ನೇ ಜನ್ಮ ವಾರ್ಷಿಕೋತ್ಸವವನ್ನು ರಾಜ್ಯದಾದ್ಯಂತ ಮಾರ್ಗಸೂಚಿ ಗಳನ್ನು ಅನುಸರಿಸಿ ಸೂಕ್ತ ರೀತಿಯಲ್ಲಿ ಆಚರಿಸುತ್ತಿದೆ,” ಎಂದು ಮುಖ್ಯಮಂತ್ರಿ ಬರೆದಿದ್ದಾರೆ.

ನೇತಾಜಿ ಸ್ಮರಣಾರ್ಥ ಕೆಲವು ದೀರ್ಘಾವಧಿಯ ಕಾರ್ಯಕ್ರಮಗಳ ನಡುವೆ 100 ಪ್ರತಿಶತ ರಾಜ್ಯ ನಿಧಿಯೊಂದಿಗೆ ಅಂತಾರಾಷ್ಟ್ರೀಯ ಸಹಯೋಗದೊಂದಿಗೆ ರಾಷ್ಟ್ರೀಯ ವಿಶ್ವವಿದ್ಯಾಲಯ, ಜೈ ಹಿಂದ್ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುತ್ತಿದೆ,” ಎಂದು ಹೇಳಿದ್ದಾರೆ.