ಬೆಂಗಳೂರು : ಟೋಲ್ ಶುಲ್ಕ, ಹಳೆ ವಾಹನ ವಿಲೇವಾರಿ ನೀತಿ, ಮೋಟಾರು ಕಾಯ್ದೆ ಉಲ್ಲಂಘನೆ ದಂಡ ಹೆಚ್ಚಳ, ಡೀಸೆಲ್ ದರ ಹೆಚ್ಚಳ ಸೇರಿದಂತೆ ಕೇಂದ್ರ ಸರ್ಕಾರ ಸಾರಿಗೆ ವಿರೋಧಿ ನೀತಿಗಳನ್ನು ಖಂಡಿಸಿ ಏಪ್ರಿಲ್ 5 ರಿಂದ ದೇಶವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಫೆಡರೇಷನ್ ಅಧ್ಯಕ್ಷ ಬಿ.ಚನ್ನಾ ರೆಡ್ಡಿ ತಿಳಿಸಿದ್ದಾರೆ.
ಲಾಕ್ ಡೌನ್ ನಿಂದ ಸರಕು ಸಾಗಣೆ ವಲಯ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರವು ತೈಲ ಬೆಲೆ ಹೆಚ್ಚಿಸುವ ಮೂಲಕ ಗಾಯದ ಮೇಲೆ ಬರೆ ಎಳೆಯುತ್ತಿದೆ. 6 ತಿಂಗಳಲ್ಲಿ ಡೀಸೆಲ್ ಬೆಲೆ 20.42 ರೂ. ರಷ್ಟು ಹೆಚ್ಚಳ ಕಂಡಿದೆ. ಹೀಗಾಗಿ ಮುಷ್ಕರ ನಡೆಸಲು ಮುಂದಾಗಿದ್ದೇವೆ ಎಂದು ಹೇಳಿದರು.