ಹೈದರಬಾದ್: ತೆಲಂಗಾಣ(Telangana)ದಲ್ಲಿ ಪೊಲೀಸ್ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಆರು ಜನ ಮಾವೋವಾದಿಗಳು ಹತರಾಗಿದ್ದಾರೆ(Naxals encounter). ಕರಕಗೂಡು ಮಂಡಲದ ರಘುನಾಥಪಾಲೆಂ ಸಮೀಪದ ಅರಣ್ಯ ಪ್ರದೇಶದಲ್ಲಿ ಗುರುವಾರ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು, ಈಪ್ರದೇಶದಲ್ಲಿ ಮಾವೋವಾದಿಗಳು ಬೀಡು ಬಿಟ್ಟಿರುವ ಬಗ್ಗೆ ಪೊಲೀಸರು ಮಾಹಿತಿ ಪಡೆದಿದ್ದು ಕೂಂಬಿಂಗ್ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದರು.
ಹತ್ಯೆಯಾದವರಲ್ಲಿ ತೆಲಂಗಾಣದ ಉನ್ನತ ಮಾವೋವಾದಿ ನಾಯಕರಿದ್ದಾರೆ ಎಂದು ನಂಬಲಾಗಿದೆ ಎಂದು ಮೂಲಗಳು ಸೂಚಿಸುತ್ತವೆ,. ಎನ್‌ಕೌಂಟರ್‌ನಿಂದಾಗಿ ಆ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ, ಇನ್ನು ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಘಟನೆಯ ಕುರಿತು ಅಧಿಕಾರಿಗಳು ತಮ್ಮ ತನಿಖೆಯನ್ನು ಮುಂದುವರೆಸಿರುವುದರಿಂದ ಹೆಚ್ಚಿನ ವಿವರಗಳು ಹೋರಬೀಳಬೇಕಿದೆ.
6 Maoists were killed and two security personnel were injured in an encounter with police in Telangana's Bhadradri Kothagudem district, one of whom is critical and undergoing treatment: Police sources https://t.co/MQln5JEx2E
— ANI (@ANI) September 5, 2024
ಛತ್ತೀಸ್‌ಗಢದ ದಾತೇವಾಡ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿರ್‌ಜಿ ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ ತಂಡವು ಒಂಬತ್ತು ನಕ್ಸರನ್ನು ಹೊಡೆದುರುಳಿಸಿದೆ. ಮಾವೋವಾದಿಗಳನ್ನು ಹತ್ಯೆ ಮಾಡಿರುವ ಮಾಹಿತಿಯನ್ನು ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಈ ಪ್ರದೇಶದಲ್ಲಿ ಮಾವೋವಾದಿಗಳ ತಮ್ಮ ಕುಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಎನ್‌ಕೌಂಟರ್ ಬೆಳಿಗ್ಗೆ 10: 30 ರ ಸುಮಾರಿಗೆ ಪ್ರಾರಂಭವಾಯಿತು. ನಿರಂತರವಾಗಿ ನಡೆದ ಗುಂಡಿನ ಚಕಮಕಿಯಲ್ಲಿ ಒಂಬತ್ತು ನಕ್ಸಲರು ಹತ್ಯೆಯಾಗಿದ್ದರು. ಆದಾಗ್ಯೂ ಗುಂಡಿನ ದಾಳಿಯನ್ನು ಭದ್ರತಾ ಪಡೆದ ಮುಂದುವರಿಸಿದೆ. ಒಂಬತ್ತು ಮಾವೋವಾದಿಗಳು ಮೃತಪಟ್ಟಿದ್ದಾರೆ., ಸೆಲ್ಫ್-ಲೋಡಿಂಗ್ ರೈಫಲ್ (ಎಸ್ಎಲ್ಆರ್), .303 ರೈಫಲ್ ಮತ್ತು .315 ಬೋರ್ ರೈಫಲ್ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.
ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಎಲ್ಲ ಯೋಧರು ಸುರಕ್ಷಿತವಾಗಿದ್ದಾರೆ. ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಕಾರ್ಯಾಚರಣೆ ಪೂರ್ಣಗೊಂಡ ನಂತರ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು” ಎಂದು ಅಧಿಕಾರಿಗಳು ಹೇಳಿದೆ. ಕಳೆದ ವಾರ ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಪ್ರತ್ಯೇಕ ಘಟನೆಗಳಲ್ಲಿ ಮೂವರು ಗ್ರಾಮಸ್ಥರನ್ನು ‘ಪೊಲೀಸ್ ಮಾಹಿತಿದಾರರು’ ಎಂದು ಶಂಕಿಸಿ ಹತ್ಯೆ ಮಾಡಲಾಗಿತ್ತು.
ಈ ಸುದ್ದಿಯನ್ನೂ ಓದಿ: ಎನ್‌ಕೌಂಟರ್‌ನಲ್ಲಿ ಓರ್ವ ಮಹಿಳಾ ನಕ್ಸಲ್ ಸಾವು
ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಛತ್ತೀಸ್‌ಗಢಕ್ಕೆ ಭೇಟಿ ನೀಡಿದ್ದರು, ಅಲ್ಲಿ ಅವರು ಏಳು ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರೊಂದಿಗೆ ನಕ್ಸಲ್ ವಿರೋಧಿ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದರು.