Friday, 22nd November 2024

ಎನ್‍ಸಿಪಿಯ ಅಜಿತ್ ಪವಾರ್’ಗೂ ಕೊರೊನಾ ಸೋಂಕು ದೃಢ

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ, ಎನ್‍ಸಿಪಿ ನಾಯಕ ಅಜಿತ್ ಪವಾರ್ ಅವರಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಪವಾರ್ ಅವರಿಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ಪವಾರ್, ನನಗೆ ಕೋವಿಡ್-19 ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಾನು ಚೇತರಿಸಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನನ್ನ ಆರೋಗ್ಯದ ಬಗ್ಗೆ ಕಾರ್ಯಕರ್ತರು ಆತಂಕಕ್ಕೆ ಒಳಗಾಗಬೇಕಿಲ್ಲ. ನಾನು ಗುಣಮುಖನಾಗಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದ್ದಾರೆ.