ಎನ್‌ಸಿಪಿಯ 25ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ 82 ವರ್ಷದ ಹಿರಿಯ ರಾಜಕಾರಣಿ ಪವಾರ್ ಈ ಘೋಷಣೆ ಮಾಡಿದ್ದಾರೆ.
ಎನ್‌ಸಿಪಿಯನ್ನ 1999ರಲ್ಲಿ ಶರದ್ ಪವಾರ್ ಮತ್ತು ಪಿಎ ಸಂಗ್ಮಾ ಸ್ಥಾಪಿಸಿದ್ದರು. ಇಂದು 25ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮವನ್ನು ದೆಹಲಿ ನಡೆಸಲಾಗಿದೆ. ಹಿರಿಯ ಎನ್‌ಸಿಪಿ ನಾಯಕ ಅಜಿತ್ ಪವಾರ್ ಸಮ್ಮುಖದಲ್ಲಿ ಶರದ್ ಪವಾರ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಹೊಸ ನಾಯಕರನ್ನು ಘೋಷಿಸಿದ್ದಾರೆ.
ಸುಪ್ರಿಯಾ ಸುಳೆ ಟ್ವೀಟ್ ಮಾಡಿದ್ದು, ನಾನು ಎನ್‌ಸಿಪಿ ಅಧ್ಯಕ್ಷರಿಗೆ ಆಭಾರಿಯಾಗಿದ್ದೇನೆ. ಪವಾರ್ ಸಾಹೇಬ್ ಮತ್ತು ಎಲ್ಲ ಹಿರಿಯ ನಾಯಕರು, ಪಕ್ಷದ ಸಹೋದ್ಯೋಗಿಗಳು, ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಪ್ರಫುಲ್ ಭಾಯ್ ಅವರೊಂದಿಗೆ ಕಾರ್ಯಾಧ್ಯಕ್ಷರ ಈ ದೊಡ್ಡ ಜವಾಬ್ದಾರಿಯನ್ನು ನೀಡಿದ್ದದ್ದಾರೆ. ಎನ್‌ಸಿಪಿಯನ್ನು ಮತ್ತಷ್ಟು ಬಲಪಡಿಸಲು ಶ್ರದ್ಧೆಯಿಂದ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಕಳೆದ ತಿಂಗಳು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಪವಾರ್ ಮುಂದಾಗಿದ್ದರು. ಆದರೆ, ನಂತರ ಪಕ್ಷದ ನಾಯಕರು, ಕಾರ್ಯಕರ್ತರು ಮತ್ತು ಇತರ ರಾಜಕೀಯ ಮುಖಂಡರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಬಳಿಕ ಪವಾರ್ ಅವರ ಪ್ರಸ್ತಾಪವನ್ನು ಚರ್ಚಿಸಲು ಸಮಿತಿ ರಚಿಸಿದ್ದರು. ಮೇ 5ರಂದು ಆ ಸಮಿತಿಯನ್ನು ಪವಾರ್ ಅವರನ್ನು ರಾಜೀನಾಮೆಯನ್ನು ತಿರಸ್ಕರಿಸಿ ಪಕ್ಷದ ಅಧ್ಯಕ್ಷರಾಗಿ ಅವರನ್ನೇ ಮುಂದುವರಿಯುವಂತೆ ಒತ್ತಾಯಿಸಿತ್ತು.