Friday, 19th April 2024

ಎನ್‌ಸಿಪಿ ನೂತನ ಕಾರ್ಯಾಧ್ಯಕ್ಷರನ್ನಾಗಿ ಪ್ರಫುಲ್ ಪಟೇಲ್, ಸುಪ್ರಿಯಾ ಸುಳೆ ನೇಮಕ

ನವದೆಹಲಿ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಹಿರಿಯ ನಾಯಕರಾದ ಪ್ರಫುಲ್ ಪಟೇಲ್ ಮತ್ತು ಸುಪ್ರಿಯಾ ಸುಳೆ ಅವರ ಹೆಸರನ್ನು ಪಕ್ಷದ ಅಧ್ಯಕ್ಷ ಶರದ್ ಪವಾರ್ ಪ್ರಕಟಿಸಿದ್ದಾರೆ.

ಎನ್‌ಸಿಪಿಯ 25ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ 82 ವರ್ಷದ ಹಿರಿಯ ರಾಜಕಾರಣಿ ಪವಾರ್ ಈ ಘೋಷಣೆ ಮಾಡಿದ್ದಾರೆ.

ಎನ್‌ಸಿಪಿಯನ್ನ 1999ರಲ್ಲಿ ಶರದ್ ಪವಾರ್ ಮತ್ತು ಪಿಎ ಸಂಗ್ಮಾ ಸ್ಥಾಪಿಸಿದ್ದರು. ಇಂದು 25ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮವನ್ನು ದೆಹಲಿ ನಡೆಸಲಾಗಿದೆ. ಹಿರಿಯ ಎನ್‌ಸಿಪಿ ನಾಯಕ ಅಜಿತ್ ಪವಾರ್ ಸಮ್ಮುಖದಲ್ಲಿ ಶರದ್ ಪವಾರ್​​ ಪಕ್ಷದ ಪ್ರಮುಖ ಹುದ್ದೆಗಳಿಗೆ ಹೊಸ ನಾಯಕರನ್ನು ಘೋಷಿಸಿದ್ದಾರೆ.

ಸುಪ್ರಿಯಾ ಸುಳೆ ಟ್ವೀಟ್​ ಮಾಡಿದ್ದು, ನಾನು ಎನ್‌ಸಿಪಿ ಅಧ್ಯಕ್ಷರಿಗೆ ಆಭಾರಿಯಾಗಿದ್ದೇನೆ. ಪವಾರ್ ಸಾಹೇಬ್ ಮತ್ತು ಎಲ್ಲ ಹಿರಿಯ ನಾಯಕರು, ಪಕ್ಷದ ಸಹೋದ್ಯೋಗಿಗಳು, ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಪ್ರಫುಲ್ ಭಾಯ್ ಅವರೊಂದಿಗೆ ಕಾರ್ಯಾಧ್ಯಕ್ಷರ ಈ ದೊಡ್ಡ ಜವಾಬ್ದಾರಿಯನ್ನು ನೀಡಿದ್ದದ್ದಾರೆ. ಎನ್‌ಸಿಪಿಯನ್ನು ಮತ್ತಷ್ಟು ಬಲಪಡಿಸಲು ಶ್ರದ್ಧೆಯಿಂದ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಪವಾರ್​ ಮುಂದಾಗಿದ್ದರು. ಆದರೆ, ನಂತರ ಪಕ್ಷದ ನಾಯಕರು, ಕಾರ್ಯಕರ್ತರು ಮತ್ತು ಇತರ ರಾಜಕೀಯ ಮುಖಂಡರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಬಳಿಕ ಪವಾರ್ ಅವರ ಪ್ರಸ್ತಾಪವನ್ನು ಚರ್ಚಿಸಲು ಸಮಿತಿ ರಚಿಸಿದ್ದರು. ಮೇ 5ರಂದು ಆ ಸಮಿತಿಯನ್ನು ಪವಾರ್​ ಅವರನ್ನು ರಾಜೀನಾಮೆಯನ್ನು ತಿರಸ್ಕರಿಸಿ ಪಕ್ಷದ ಅಧ್ಯಕ್ಷರಾಗಿ ಅವರನ್ನೇ ಮುಂದುವರಿಯುವಂತೆ ಒತ್ತಾಯಿಸಿತ್ತು.

error: Content is protected !!