Friday, 22nd November 2024

ಮಣಿಪುರ ಹಿಂಸಾಚಾರ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ?

ನವದೆಹಲಿ: ಮಣಿಪುರ ಹಿಂಸಾಚಾರದ ಕುರಿತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ಮೈತ್ರಿಕೂಟ INDIA, ಈಗ ಲೋಕಸಭೆ ಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ ಯಿದೆ ಎಂದು ಮೂಲಗಳು ತಿಳಿಸಿವೆ.
ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಒಳಗೊಂಡ ಮೈತ್ರಿಕೂಟ(ಇಂಡಿಯಾ)ದ ಸಭೆ ಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಚರ್ಚಿಸಲಾಗಿದೆ. ಮಣಿಪುರ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ಪ್ರಾರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಇದು ಪರಿಣಾಮಕಾರಿ ಮಾರ್ಗ ಎಂದು ವಿವಿಧ ಪಕ್ಷಗಳು ಹೇಳಿದ ನಂತರ ಅವಿಶ್ವಾಸ ನಿರ್ಣಯ ಮಂಡಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಣಿಪುರ ವಿಚಾರಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ವಿಪಕ್ಷಗಳ ತಂತ್ರ ರಾಜ್ಯಸಭೆಯಲ್ಲೂ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.
ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ಪ್ರತಿಪಕ್ಷಗಳ ನಡೆಯ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಅವರು ಕಳೆದ ಬಾರಿಯೂ ಅವಿಶ್ವಾಸ ನಿರ್ಣಯ ತಂದ ವಿಫಲವಾಗಿದ್ದಾರೆ. ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳ ಪ್ರಬಲ ಬಹುಮತ ದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿತು.
ಲೋಕಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಮೊದಲ ಅವಿಶ್ವಾಸ ನಿರ್ಣಯವನ್ನು ಜುಲೈ 20, 2018 ರಂದು ಮಂಡಿಸ ಲಾಯಿತು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(NDA) ಅವಿಶ್ವಾಸ ನಿರ್ಣಯದ ಪರವಾಗಿ 325 ಸಂಸದರು ಮತ್ತು ವಿರುದ್ಧವಾಗಿ ಕೇವಲ 126 ಸಂಸದರು ಮತ ಚಲಾಯಿಸಿದ್ದರು.