Saturday, 23rd November 2024

ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆ: ಉತ್ತರಿಸಲು ಎನ್ಟಿಎಗೆ 2 ವಾರ ಗಡುವು

ವದೆಹಲಿ: ನೀಟ್ ಯುಜಿ 2024 ಪ್ರವೇಶ ಪರೀಕ್ಷೆಯನ್ನು ರದ್ದುಗೊಳಿಸಲು ಮತ್ತು ಮರು ನಡೆಸಲು ಒತ್ತಾಯಿಸಿದ ಅಭ್ಯರ್ಥಿಗಳಿಗೆ ಮತ್ತೊಮ್ಮೆ ನಿರಾಶೆಯಾಗಿದೆ. ಜೂನ್ 13 ರಂದು ನಡೆದ ಅರ್ಜಿಯ ವಿಚಾರಣೆಯ ಸಮಯದಲ್ಲಿ, ವಿಭಾಗೀಯ ಪೀಠವು ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆ ನೀಡಲು ಮತ್ತೊಮ್ಮೆ ನಿರಾಕರಿಸಿತು.

ಅಲ್ಲದೆ, 2 ವಾರಗಳಲ್ಲಿ ಉತ್ತರವನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್ಟಿಎ) ಆದೇಶಿಸಿದೆ. ಇದಲ್ಲದೆ, ಜುಲೈ 8 ರಂದು ಎಲ್ಲಾ ಸಂಬಂಧಿತ ವಿಷಯಗಳನ್ನು ಒಟ್ಟಿಗೆ ಆಲಿಸುವಂತೆ ನ್ಯಾಯಪೀಠ ನಿರ್ದೇಶನ ನೀಡಿತು.

ವೈದ್ಯಕೀಯ, ದಂತವೈದ್ಯಕೀಯ, ಆಯುಷ್ ಮತ್ತು ನರ್ಸಿಂಗ್ ಪದವೀಧರರ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜೂ.4 ರಂದು ನಡೆಸಿದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ – ನೀಟ್ ಯುಜಿ) 2024 ಅನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಜೂ.13 ರಂದು ಸುಪ್ರೀಂ ಕೋರ್ಟ್ನಲ್ಲಿ ಮತ್ತೆ ವಿಚಾರಣೆ ನಡೆಸಬೇಕಿತ್ತು. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರ ಬೇಸಿಗೆ ವಿಶೇಷ ಪೀಠವು ಅರ್ಜಿಯ ವಿಚಾರಣೆ ನಡೆಸಬೇಕಿತ್ತು.