Sunday, 15th December 2024

1,32,364 ಜನರಲ್ಲಿ ಸೋಂಕು ಪತ್ತೆ, 2713 ಮಂದಿ ಕರೋನಾ ಮಹಾಮಾರಿಗೆ ಬಲಿ

#covid

ನವದೆಹಲಿ: ಭಾರತದಲ್ಲಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,32,364 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,85,74,350ಕ್ಕೆ ಏರಿಕೆಯಾಗಿದೆ.

2713 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಬಲಿಯಾದವರ ಸಂಖ್ಯೆ 3,40,702ಕ್ಕೆ ಏರಿಕೆಯಾಗಿದೆ.

16,35,993 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,65,97,655 ಸೋಂಕಿತರು ಗುಣಮುಖರಾಗಿದ್ದಾರೆ. 2,07,071 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.