ನವದೆಹಲಿ: ಭಾರತದಲ್ಲಿ ಕರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದೆ. ಕಳೆದ 24 ತಾಸುಗಳಲ್ಲಿ ಭಾರತದಲ್ಲಿ 2,67,334 ಹೊಸ ಪ್ರಕರಣಗಳು ಪತ್ತೆಯಾಗಿ, 4529 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 2,83,248ಕ್ಕೆ ತಲುಪಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 32,26,719ಕ್ಕೆ ಏರಿಕೆಯಾಗಿದೆ. ಇನ್ನು ಭಾರತದಲ್ಲಿ ಒಂದೇ 20,08,296 ಮಂದಿಯನ್ನು ಕರೋನಾ ಪರೀಕ್ಷೆಗೊಳಪಡಿಸ ಲಾಗಿದ್ದು, 32,03,01,177 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 18,58,09,302 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.