Wednesday, 11th December 2024

1,31,968 ಹೊಸ ಕರೋನಾ ಪ್ರಕರಣ ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ 1,31,968 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಗುರುವಾರ 61,899 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೂ 1,19,13,292 ಮಂದಿ ಸೋಂಕಿನಿಂದ ಗುಣಮುಖ ರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 780 ಮಂದಿ ಸಾವನ್ನಪ್ಪಿದ್ದು, ಇದುವರೆಗೂ ಸೋಂಕಿನಿಂದ 1,67,642 ಮರಣ ಪ್ರಕರಣ ದಾಖಲಾಗಿದೆ.

ಬುಧವಾರ 1,31,968 ಪ್ರಕರಣಗಳು ದಾಖಲಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1,30,60,542ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ 9,79,608 ಸಕ್ರಿಯ ಪ್ರಕರಣಗಳಿವೆ.

2 ರಿಂದ 3 ವಾರ ತೀವ್ರ ಕಟ್ಟೆಚ್ಚರ ವಹಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಗುರುವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿರುವ ಅವರು, ಅತಿಹೆಚ್ಚು ಸೋಂಕು ಹರಡುವ ಅಪಾಯ ವಿರುವ ಪ್ರದೇಶಗಳನ್ನು ಮೈಕ್ರೋ ಕಂಟೇನ್ಮೆಂಟ್ ಝೋನ್ ಆಗಿ ಮಾಡುವುದು. ಈ ಪ್ರದೇಶಗಳಲ್ಲಿ ಅತಿಹೆಚ್ಚು ನಿಗಾ ವಹಿಸಬೇಕು. ಸೋಂಕಿನ ತಪಾಸಣೆಯನ್ನು ಮಾಡುವುದರ ಜೊತೆಗೆ ಕೊವಿಡ್-19 ಪಾಸಿಟಿವ್ ಪ್ರಮಾಣವನ್ನು ಶೇ.5ರಷ್ಟು ಕಡಿಮೆ ಮಾಡಬೇಕಿದೆ ಎಂದರು.

ಏ.11 ರಿಂದ 14ರವರೆಗೂ ಲಸಿಕೆ ಉತ್ಸವ ನಡೆಸಲಾಗುತ್ತದೆ. ನಾಲ್ಕು ದಿನಗಳಲ್ಲಿ ಅತಿಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಬೇಕಿದೆ. ಆ ಮೂಲಕ ಲಸಿಕೆಯು ವ್ಯರ್ಥವಾಗುವುದನ್ನು ತಡೆಯೋಣ ಎಂದು ಮನವಿ ಮಾಡಿಕೊಂಡಿದ್ದಾರೆ.