Thursday, 12th December 2024

ಉತ್ತರಾಖಂಡ್‌ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಆಯ್ಕೆ

ಡೆಹರಾಡೂನ್‌: ಶನಿವಾರ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಉತ್ತರಾಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಉತ್ತರಾಖಂಡದಲ್ಲಿ ರಾಜಕೀಯ ಕೋಲಾಹಲ ತೀವ್ರಗೊಂಡಿದ್ದು, ತಿರತ್ ಸಿಂಗ್ ರಾವತ್ ಶುಕ್ರವಾರ  ಸಿಎಂ ಹುದ್ದೆಗೆ ರಾಜೀನಾಮೆ ನೀಡಿದರು. ಶನಿವಾರ ಡೆಹ್ರಾಡೂನ್ʼನಲ್ಲಿರುವ ರಾಜ್ಯ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಇತರ ಬಿಜೆಪಿ ಮುಖಂಡರು ಉತ್ತರಾಖಂಡದ ಹೊಸ ಮುಖ್ಯಮಂತ್ರಿಯನ್ನ ಆಯ್ಕೆ ಮಾಡಲು ಶಾಸಕಾಂಗ ಪಕ್ಷದ ಸಭೆ ನಡೆಸಿದರು.

ಈ ಸಭೆಯಲ್ಲಿ ಶಾಸಕರು, ಪುಷ್ಕರ್ ಸಿಂಗ್ ಧಮಿ ಅವ್ರನ್ನ ಉತ್ತರಾಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ.