Tuesday, 10th December 2024

3,52,991 ಹೊಸ ಕರೋನಾ ಸೋಂಕು ಪ್ರಕರಣ ಪತ್ತೆ

#corona

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,52,991 ಹೊಸ ಕರೋನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 2,812 ಸೋಂಕಿತರು ಮೃತಪಟ್ಟಿದ್ದು, 2,19,272 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈವರೆಗೂ ಒಟ್ಟು 1,43,04,382 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 28,13,658 ಸಕ್ರಿಯ ಪ್ರಕರಣಗಳಿವೆ. ಈವರೆಗೆ 14.19 (14,19,11,223) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ.