Saturday, 14th December 2024

ನೂತನ ವಿದೇಶಾಂಗ ಕಾರ್ಯದರ್ಶಿ ಅಧಿಕಾರ ಸ್ವೀಕಾರ

ನವದೆಹಲಿ: ಉಕ್ರೇನ್‌ನಲ್ಲಿನ ಬಿಕ್ಕಟ್ಟು ಸೇರಿದಂತೆ ವಿವಿಧ ಭೌಗೋಳಿಕ ರಾಜಕೀಯ ಬೆಳವಣಿಗೆಗಳ ಮಧ್ಯೆ ಅನುಭವಿ ರಾಜತಾಂತ್ರಿಕ ವಿನಯ್ ಮೋಹನ್ ಕ್ವಾತ್ರಾ ಅವರು ಭಾನುವಾರ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು.

1988ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಅಧಿಕಾರಿ, ಕ್ವಾತ್ರಾ ಅವರು ಶನಿವಾರ ಸೇವೆಯಿಂದ ನಿವೃತ್ತರಾದ ಹರ್ಷ್ ವರ್ಧನ್ ಶ್ರಿಂಗ್ಲಾ ಅವರ ಉತ್ತರಾ ಧಿಕಾರಿಯಾಗಿದ್ದಾರೆ. ಕ್ವಾತ್ರಾ ಅವರು ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ನೇಪಾಳಕ್ಕೆ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸು ತ್ತಿದ್ದರು.

ಉಕ್ರೇನ್ ಸಂಘರ್ಷ, ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟು ಮತ್ತು ಅಫ್ಘಾನಿಸ್ತಾನದ ಪರಿಸ್ಥಿತಿ ಮತ್ತು ಇಂಡೋ-ಪೆಸಿಫಿಕ್‌ನಲ್ಲಿನ ಬೆಳವಣಿಗೆಗಳು ಸೇರಿದಂತೆ ವಿವಿಧ ಭೌಗೋಳಿಕ ರಾಜಕೀಯ ಬೆಳವಣಿಗೆಗಳನ್ನು ಭಾರತ ಎದುರಿಸುತ್ತಿರುವ ಸಮಯದಲ್ಲಿ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್‌ಗೆ ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಭೇಟಿಗೆ ತೆರಳುತ್ತಿದ್ದು, ಇಂಧನ ಭದ್ರತೆ ಚರ್ಚೆಯ ಪ್ರಮುಖ ವಿಷಯವಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಕ್ವಾತ್ರಾ ಹೇಳಿದ್ದಾರೆ.